ನೇತ್ರ ಶಿಬಿರದಲ್ಲಿ ವೈದ್ಯರ ನಿರ್ಲಕ್ಷ್ಯ: ಕಣ್ಣು ಕಳೆದುಕೊಂಡ ವೃದ್ಧರು

ಕಣ್ಣು ತಪಾಸಣೆಗೆ ಒಳಗಾಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ನಾಲ್ಕು ಮಂದಿ ವೃದ್ಧರು ತಮ್ಮ ದೃಷ್ಟಿ ಕಳೆದುಕೊಂಡು ಪರಿತಪಿಸುತ್ತಿರುವ ಪ್ರಕರಣವೊಂದು ಮಹಾರಾಷ್ಟ್ರದ ವಾಷಿಮ್ ನಗರದಲ್ಲಿ ನಡೆದಿದೆ...
ಮಹಾರಾಷ್ಟ್ರ ಉಸ್ತುವಾರಿ ಸಚಿವ ರಂಜಿತ್ ಪಾಟೀಲ್ ರೋಗಿಗಳ ಆರೋಗ್ಯ ವಿಚಾರಿಸುತ್ತಿರುವುದು.
ಮಹಾರಾಷ್ಟ್ರ ಉಸ್ತುವಾರಿ ಸಚಿವ ರಂಜಿತ್ ಪಾಟೀಲ್ ರೋಗಿಗಳ ಆರೋಗ್ಯ ವಿಚಾರಿಸುತ್ತಿರುವುದು.

ಮುಂಬೈ: ಕಣ್ಣು ತಪಾಸಣೆಗೆ ಒಳಗಾಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ನಾಲ್ಕು ಮಂದಿ ವೃದ್ಧರು ತಮ್ಮ ದೃಷ್ಟಿ ಕಳೆದುಕೊಂಡು ಪರಿತಪಿಸುತ್ತಿರುವ ಪ್ರಕರಣವೊಂದು ಮಹಾರಾಷ್ಟ್ರದ ವಾಷಿಮ್ ನಗರದಲ್ಲಿ ನಡೆದಿದೆ.

ಅಕ್ಟೋಬರ್ 15 ರಂದು ವಾಷಿಮ್ ನಗರದಲ್ಲಿ ನಡೆದ ನೇತ್ರ ಶಿಬಿರದಲ್ಲಿ ಸುಮಾರು 30 ಕ್ಕೂ ಹೆಚ್ಚು ಮಂದಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರ ಚಿಕಿತ್ಸೆ ನಡೆದ ಕೇವಲ ಕೆಲವು ದಿನಗಳಲ್ಲೇ ಶಸ್ತ್ರಚಿಕಿತ್ಸೆ ಮಾಡಿಕೊಂಡ 14 ಮಂದಿಗೆ ಕಣ್ಣಿನ ನೋವು ಕಾಣಿಸಿಕೊಂಡಿದೆ. ಕೂಡಲೇ ನಾಗರಿಕ ಆಸ್ಪತ್ರೆಗೆ ಬಂದಿರುವ ಜನರು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಈ ವೇಳೆ ಪರೀಕ್ಷೆ ನಡೆಸಿರುವ ವೈದ್ಯರು ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ನಿರ್ಲಕ್ಷ್ಯವಹಿಸಿರುವುದಾಗಿ ಹೇಳಿದ್ದಾರೆ.

ತಪಾಸಣೆ ವೇಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜನರ ಕಣ್ಣುಗಳಿಗೆ ಬ್ಯಾಕ್ಟೀರಿಯಾಗಳಿಂದ ಸೋಂಕುಂಟಾಗಿರುವುದು ಕಂಡುಬಂದಿದ್ದು, ಇದರಿಂದಾಗಿ ಕೆಲವರು ದೃಷ್ಟಿ ಕಳೆದುಕೊಂಡಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದ ನೇತ್ರ ತಪಾಸಣಾ ಶಿಬಿರವು ಇದೀಗ ಹಲವೆಡೆ ಭಾರಿ ಸುದ್ದಿ ಮಾಡುತ್ತಿದ್ದು, ವೈದ್ಯರ ನಿರ್ಲಕ್ಷ್ಯದ ವಿರುದ್ಧ ಕೂಗು ಕೇಳಿಬರುತ್ತಿದೆ. ಘಟನೆ ಕುರಿತಂತೆ ಈಗಾಗಲೇ ಶಸ್ತ್ರಚಿಕಿತ್ಸೆ ನಡೆಸಿದ ಇಬ್ಬರು ವೈದ್ಯರು ಸೇರಿ 5 ಸಿಬ್ಬಂದಿಗಳನ್ನು ಮಹಾರಾಷ್ಟ್ರ ರಾಜ್ಯ ಸರ್ಕಾರ ವಜಾಗೊಳಿಸಿದೆ.

ಈ ಕುರಿತಂತೆ ಮಾತನಾಡಿರುವ ವೈದ್ಯ ಟಿ.ಪಿ.ಲಹಾನೆ ಅವರು, ಶಸ್ತ್ರಚಿಕಿತ್ಸೆಗೊಳಪಟ್ಟ ಜನರನ್ನು ಇದೀಗ ಪರೀಕ್ಷೆಗೊಳಪಡಿಸಲಾಗಿದೆ. ಇದೀಗ ಮೂವರಿಗೆ ಚಿಕಿತ್ಸೆ ನೀಡಲಾಗಿದ್ದು, ಮೂವರಿಗೆ ಪುನಃ ದೃಷ್ಟಿ ಬಂದಿದೆ. ತಪಾಸಣೆ ವೇಳೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಪ್ರಸ್ತುತ 17 ರೋಗಿಗಳ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲು ಸಾಧ್ಯವಾದಷ್ಟು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರೋಗಿಗಳು ಅಕ್ಟೋಬರ್ 6ರಂದು ವಾಷಿಮ್ ನಗರದಲ್ಲಿ ನಡೆದ ಶಿಬಿರದಲ್ಲಿ ಶಸ್ತ್ರಚಿಕಿಸ್ತೆಗೊಳಗಾಗಿದ್ದಾರೆ. ಇವರನ್ನು ತಪಾಸಣೆಗೊಳಪಡಿಸದೆಯೇ ವೈದ್ಯರು ಶಸ್ತ್ರಚಿಕಿತ್ಸೆಗೆ ನೇರವಾಗಿ ಅಕೊಲಾ ವೈದ್ಯಕೀಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಲ್ಲಿಯೂ ಅವರನ್ನು ಪರೀಕ್ಷೆಗೊಳಪಡಿಸದಿರುವುದೆ ಶಸ್ತ್ರಚಿಕಿತ್ಸೆ ನಡೆಸಿರುವುದು ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.

ಶಸ್ತ್ರಚಿಕಿತ್ಸೆಗೆ ಬಳಸಿರುವ ಉಪಕರಣಗಳು ಶುದ್ಧತೆ ಇಲ್ಲದಿರುವುದು ಸೋಂಕಿಗೆ ಕಾರಣವಾಗಿದೆ. ಇಂತಹ ಸಮಸ್ಯೆಗಳಿಗೆ ಚಿಕಿತ್ಸೆ ಇದ್ದು, ಸೋಂಕು ಕಂಡು ಬಂದ ನಂತರ 2-3 ದಿನಗಳೊಳಗಾಗಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರೆ 24 ಗಂಟೆಗಳಲ್ಲಿ ದೃಷ್ಟಿ ಬರುತ್ತದೆ. ರೋಗಿಗಳ ಚಿಕಿತ್ಸೆಗಾಗಿ ಈಗಾಗಲೇ ತಂಡಗಳನ್ನು ರಚನೆ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆಗೊಳಗಾದ ಎಲ್ಲಾ ರೋಗಿಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಶಸ್ತ್ರಚಿಕಿತ್ಸೆಗೊಳಪಟ್ಟ ಎಲ್ಲಾ ರೋಗಿಗಳನ್ನು ಜೆಜೆ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣವನ್ನು ವೈಯಕ್ತಿಕವಾಗಿ ವಿಚಾರಣೆ ನಡೆಸಲು ರಾಜ್ಯ ಆರೋಗ್ಯ ಸಚಿವರು ಡಾ.ದೀಪಕ್ ಸಾವಂತ್ ಅವರು ಮುಂದಾಗಿದ್ದು, ಪ್ರಕರಣ ಕುರಿತಂತೆ ಮಾಹಿತಿ ಕಲೆ ಹಾಕುತ್ತಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com