ಗೋಹತ್ಯೆ, ಗೋಮಾಂಸ ನಿಷೇಧ ಪಿಐಎಲ್ ವಜಾಗೊಳಿಸಿದ ದೆಹಲಿ ಹೈಕೋರ್ಟ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗೋಮಾಂಸ ಮಾರಾಟ ಮತ್ತು ಗೋ ಹತ್ಯೆ ನಿಷೇಧಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದಹೆಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗೋಮಾಂಸ ಮಾರಾಟ ಮತ್ತು ಗೋ ಹತ್ಯೆ ನಿಷೇಧಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಜಮ್ಮು ಕಾಶ್ಮೀರದಲ್ಲಿ ಅನ್ವಯವಾದ 1932ರ ರಣಬೀರ್ ಪೀನಲ್ ಕೋಡ್ ನಂತೆ ದೆಹಲಿಯಲ್ಲೂ ಗೋಮಾಂಸ ನಿಷೇಧ ಕಾಯ್ದೆ ಜಾರಿಗೆ ತರಬೇಕು. ಪ್ರಾಣಿ ಹತ್ಯೆಗೆ ಇತರೆ ರಾಜ್ಯಗಳಲ್ಲಿ ಜಾರಿಗೆ ತಂದಿರುವಂತೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವಂತೆ ಸನ್ಯಾಸಿಯೊಬ್ಬರು ದೆಹಲಿ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಹಸುಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿ, ಅವುಗಳಿಗೆ ಆಹಾರ ಮತ್ತು ವಾಸಿಸಲು ರಕ್ಷಣೆ ನೀಡಬೇಕು ಎಂದು ಎಚ್ ಪಿ ಹೈಕೋರ್ಟ್ ಕೇಂದ್ರಕ್ಕೆ ನಿರ್ದೇಶಿಸಿದೆ ಅದರಂತೆ ಹಸುಗಳಿಗೆ ರಕ್ಷಣೆ ನೀಡಬೇಕೆಂದು ಸ್ವಾಮಿ ಸತ್ಯಾನಂದ ಚಕ್ರಧಾರಿ ಎಂಬ ಸನ್ಯಾಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com