

ಪಟ್ನಾ: ದೇಶದ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆಯ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಎರಡು ಕ್ಷೇತ್ರಗಳಲ್ಲಿ ಈಗಾಗಲೇ ಬಿಜೆಪಿ ಮುನ್ನಡೆ ಸಾಧಿಸಿದೆ.
ಬಿಹಾರದ ಆಡಳಿತ ಚುಕ್ಕಾಣಿ ಹಿಡಿಯುವವರು ಯಾರು ಎಂದು ಇಷ್ಟು ದಿನಗಳಿಂದ ಇದ್ದ ಕಾತರಕ್ಕೆ ಭಾನುವಾರ ತೆರೆಬೀಳಲಿದೆ. ಇದೀಗ ಸ್ವಲ್ಪ ಹೊತ್ತಿಗೆ ಮೊದಲು ಮತ ಎಣಿಕೆ ಕಾರ್ಯ ಆರಂಭವಾಗೊಂಡಿದೆ. ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಥಾನಗಳ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.