ದೇಶ

ಪ್ರಧಾನಿ ಮೋದಿಗೆ ಪಾಠವಾಗಲಿದೆ ಬಿಹಾರ ಚುನಾವಣೆ ಫಲಿತಾಂಶ: ಚಿದಂಬರಂ

ಸಾಕಷ್ಟು ಅಧಿಕಾರ ಹಾಗೂ ಸಂಪನ್ಮೂಲಗಳನ್ನು ಹೊಂದಿದ್ದರೂ ಸಹ ಸೋಲು ಅನುಭವಿಸುತ್ತಾರೆಂಬುದಕ್ಕೆ ಬಿಹಾರ ಚುನಾವಣೆಯೊಂದು ಉದಾಹರಣೆಯಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಇದೊಂದು ಪಾಠವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು ಭಾನುವಾರ ಹೇಳಿದ್ದಾರೆ...

Published On :

ನವದೆಹಲಿ: ಸಾಕಷ್ಟು ಅಧಿಕಾರ ಹಾಗೂ ಸಂಪನ್ಮೂಲಗಳನ್ನು ಹೊಂದಿದ್ದರೂ ಸಹ ಸೋಲು ಅನುಭವಿಸುತ್ತಾರೆಂಬುದಕ್ಕೆ ಬಿಹಾರ ಚುನಾವಣೆಯೊಂದು ಉದಾಹರಣೆಯಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಇದೊಂದು ಪಾಠವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು ಭಾನುವಾರ ಹೇಳಿದ್ದಾರೆ.

ಬಿಹಾರ ಚುನಾವಣಾ ಫಲಿತಾಂಶ ಕುರಿತಂತೆ ಖಾಸಗಿ ವಾಹಿನಿಯೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಹಾರ ಫಲಿತಾಂಶವೊಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೊಂದು ಪಾಠವಾಗಿದ್ದು, ಅವರ ವರ್ತನೆ ಹಾಗೂ ನಡವಳಿಕೆಯನ್ನು ಸರಿಪಡಿಸಿಕೊಳ್ಳಲು ಇದೊಂದು ಉತ್ತಮ ಸಮಯವಾಗಿದೆ ಎಂದು ಹೇಳಿದ್ದಾರೆ.

ಇದಲ್ಲದೆ, ಟ್ವಿಟರ್ ನಲ್ಲೂ ಪ್ರತಿಕ್ರಿಯೆ ನೀಡಿರುವ ಅವರು, ಬಿಹಾರ ಚುನಾವಣಾ ಪ್ರಚಾರದ ವೇಳೆ ಮೋದಿಯವರು ಬಹಳ ತೀಕ್ಷ್ಣ ಹಾಗೂ ಆಕ್ರಮಣಕಾರಿಯಾಗಿ ಭಾಷಣ ಮಾಡಿದ್ದರು, ತಾನು ಪ್ರಚಾರಕ್ಕಿಳಿದರೆ ಬಿಹಾರ ಚುನಾವಣೆ ಗೆದ್ದೇ ಗೆಲ್ಲುತ್ತೇವೆಂದು ಮೋದಿಯವರು ತಿಳಿದಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.