

ಶ್ರೀನಗರ: ಬಿಹಾರ ವಿಧಾನಸಭಾ ಚುನಾವಣಾ ಗೆಲುವು ಹಿನ್ನಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಬ್ದುಲ್ಲಾ ಅವರು, ಚುನಾವಣಾ ಗೆಲುವಿಗಾಗಿ ಅಭಿನಂದನೆ ಮತ್ತು ತಮಗೆ ಅರ್ಹ ಗೆಲುವು ಸಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ಮೋದಿ ಅವರನ್ನು ಉದ್ದೇಶಿಸಿ ನಿಮ್ಮ ಗೆಲುವು ದೇಶದ ಭವಿಷ್ಯದಲ್ಲಿ ಕಠಿಣ ದಿನಗಳ ಬರಲಿವೆ ಎಂಬ ಸಂದೇಶವನ್ನು ಸಾರಿದೆ ಎಂದು ಹೇಳಿದ್ದಾರೆ.
5 ಹಂತಗಳಲ್ಲಿ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಮಹಾಘಟ್ ಬಂಧನ ಮೈತ್ರೀಕೂಟ ಒಟ್ಟು 173 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಬಿಹಾರದಲ್ಲಿ ಮತ್ತೆ ಅಧಿಕಾರದತ್ತ ದಾಪುಗಾಲಿಟ್ಟಿದೆ. ಜೆಡಿಯು ಮೈತ್ರೀಕೂಟಕ್ಕೆ ತೀವ್ರ ಪೈಪೋಟಿ ನೀಡಲಿದೆ ಎಂದು ಹೇಳಲಾಗುತ್ತಿದ್ದ ಬಿಜೆಪಿ ಮೈತ್ರಿಕೂಟ ಕೇವಲ 63 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಪಡೆದುಕೊಂಡಿದೆ.