
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿಯು ಚುನಾವಣೆಯಲ್ಲಿನ ತನ್ನ ವೈಫಲ್ಯಕ್ಕೆ ಕಾರಣ ಕಂಡುಕೊಳ್ಳಲು ಬಿಜೆಪಿ ಸಂಸದೀಯ ಮಂಡಳಿಯು ಸೋಮವಾರ ಚರ್ಚೆ ನಡೆಸಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚರ್ಚೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಹಾರ ಸೋಲು ಕುರಿತಂತೆ ಇಂದು ಸಂಜೆ ಸಂಸದೀಯ ಮಂಡಳಿ ಸಭೆ ಕರೆದಿದ್ದು, ಸಭೆಯಲ್ಲಿ ಸೋಲಿನ ಹಿಂದಿನ ಕಾರಣಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಚರ್ಚೆಯಲ್ಲಿ ಉನ್ನತಾಧಿಕಾರಿಗಳು ಭಾಗಿಯಾಗಲಿದ್ದಾರೆಂದು ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.
ಈ ನಡುವೆ ಬಿಹಾರ ಫಲಿತಾಂಶ ಕುರಿತಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಅರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಗವತ್ ಅವರನ್ನು ಭೇಟಿ ಮಾಡಿದ್ದು, ಇಬ್ಬರು ನಡುವೆ ಮಾತುಕತೆಗಳು ನಡೆದಿದೆ ಎಂದು ತಿಳಿದುಬಂದಿದೆ.
Advertisement