

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹಾಮೈತ್ರಿ ಗೆಲುವಿನ ನಗೆ ಬೀರಿದೆ. ಇದರ ಜೊತೆಗೆ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತಮ್ಮ 26ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಬಿಹಾರ ಜನತೆ ನನ್ನ ಹುಟ್ಟು ಹಬ್ಬಕ್ಕೆ ಗೆಲುವಿನ ಉಡುಗೊರೆ ನೀಡಿದ್ದಾರೆ ಎಂದು ಲಾಲೂ ಪ್ರಸಾದ್ ಪುತ್ರ ತೇಜಸ್ವಿ ಹೇಳಿದ್ದಾರೆ. ಲಾಲೂ ಪುತ್ರರಾದ ತೇಜಸ್ವಿ ಮತ್ತು ತೇಜಪ್ರತಾಪ್ ರಾಘೋಪುರ್ ಮತ್ತು ಮಾಹುವಾ ವಿಧಾನಸಭೆ ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.
ಇನ್ನು ಬಿಹಾರವನ್ನು ಅಭಿವೃದ್ಧಿಗೊಳಿಸುವುದು ತಮ್ಮ ಪ್ರಮುಖ ಆದ್ಯತೆ. ಬಿಹಾರವನ್ನು ಅಭಿವೃದ್ಧಿಗೊಳಿಸಿ ಒಂದು ಮಾದರಿ ರಾಜ್ಯವನ್ನಾಗಿ ಮಾಡುವುದಾಗಿ ತೇಜಸ್ವಿ ಯಾದವ್ ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದ ತೇಜಸ್ವಿ ಯಾದವ್ ಸಿಹಿ ಹಂಚಿ ಸಂಭ್ರಮಿಸಿದರು.