ಅರಾಹ್: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದ ಆರ್‌ಜೆಡಿ ಪಕ್ಷದ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವೇಳೆ ಕಾರ್ಯಕರ್ತನೊಬ್ಬ ಕೊಲೆಯಾಗಿದ್ದಾನೆ.
ಅರಾಹ್ ನ ನವದಾ ಹಳ್ಳಿಯಲ್ಲಿ ಯಾದವ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಸ್ನೇಹಿತರೊಂದಿಗೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದ ಈ ವೇಳೆ ಅದೇ ಹಳ್ಳಿಯ ಕೆಲ ಯುವಕರು ಇದನ್ನು ವಿರೋಧಿಸಿ ಆಚರಣೆಯನ್ನು ನಿಲ್ಲಿಸುವಂತೆ ಹೇಳಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ಯುವಕರ ಗುಂಪು ಆರ್‌ಜೆಡಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ತೀವ್ರವಾಗಿ ಥಳಿತಕ್ಕೊಳಗಾದ ಕಾರ್ಯಕರ್ತನನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾರ್ಯಕರ್ತ ಮೃತಪಟ್ಟಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.