ಚುನಾವಣೆ ಸೋಲಿಗೆ ಪ್ರಧಾನಿಯನ್ನು ದೂಷಿಸುವುದು ಸರಿಯಲ್ಲ: ರಾಜನಾಥ್ ಸಿಂಗ್

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಸೋಲಿಗೆ ಪ್ರಧಾನಿಯನ್ನು ದೂಷಿಸುವುದು ಸರಿಯಲ್ಲ ಎಂದು ಕೇಂದ್ರ ಗೃಹ ಸಚಿವ...
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Updated on: 
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಸೋಲಿಗೆ ಪ್ರಧಾನಿಯನ್ನು ದೂಷಿಸುವುದು ಸರಿಯಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 
ನಾವು ಜನರ ತೀರ್ಪನ್ನು ಸ್ವೀಕರಿಸಿದ್ದೇವೆ. ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಚುನಾವಣೆ ಸೋಲಿಗೆ ಪ್ರಧಾನಿಯನ್ನು ದೂಷಿಸುವುದು ಸರಿಯಲ್ಲ. ಸೋಲುವುದು ಗೆಲ್ಲುವುದು ಪಂದ್ಯದ ಒಂದು ಆಟವಾಗಿರುತ್ತದೆ. ನಾವು ಎರಡನ್ನು ಸ್ವೀಕರಿಸಬೇಕು. ಅಷ್ಟೇ ಅಲ್ಲದೇ, ಬಿಹಾರ ಹೊರತುಪಡಿಸಿದರೆ, ಹಲವಾರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿದೆ ಎಂದು ಅವರು ಹೇಳಿದ್ದಾರೆ. 
ಬಿಜೆಪಿ ಯಾವುದಕ್ಕೂ ಹೆದರುವುದಿಲ್ಲ. ನಾವು ಮತ್ತೊಂದು ರಾಜಕೀಯ ಯುದ್ಧದಲ್ಲಿ ಹೋರಾಡಲು ಸಿದ್ಧವಿದ್ದೇವೆ ಎಂದಿದ್ದಾರೆ. ಅಲ್ಲದೇ, ಕೆಲ ಬಿಜೆಪಿ ನಾಯಕರು ಅಧ್ಯಕ್ಷ ಅಮಿತ್ ಶಾ ಅವರ ಮಾತನ್ನು ಕೇಳುತ್ತಿಲ್ಲ ಎಂಬ ಆರೋಪವನ್ನು ರಾಜನಾಥ್ ಸಿಂಗ್ ತಳ್ಳಿ ಹಾಕಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com