ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ ಮೋದಿ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಸಮಸ್ತ ಜನತೆಗೆ ಬೆಳಕಿನ ಹಬ್ಬ...
ಪ್ರಣಬ್ ಮುಖರ್ಜಿ-ನರೇಂದ್ರ ಮೋದಿ
ಪ್ರಣಬ್ ಮುಖರ್ಜಿ-ನರೇಂದ್ರ ಮೋದಿ
Updated on: 
ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿ ಶುಭಾಷಯ ಕೋರಿದ್ದಾರೆ.
ಈ ದೀಪಾವಳಿ ಹಬ್ಬ ದೇಶದಲ್ಲಿ ಏಕತೆಯನ್ನು ಸಾರುವ ಹಬ್ಬವಾಗಿದೆ. ಎಲ್ಲರೂ ಒಟ್ಟುಗೂಡಿ ಈ ಹಬ್ಬ ಆಚರಿಸೋಣ. ದೀನರಿಗೆ ಸಹಾಯ ಮಾಡಿ, ದೇಶವನ್ನು ವೈಭವೀಕರಿಸಲು ದುಡಿಯೋಣ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ.  
ಅಷ್ಟೇ ಅಲ್ಲದೇ, ವಾಯು ಮಾಲಿನ್ಯವಾಗದಂತೆ ದೀಪಾವಳಿ ಆಚರಿಸಿ ಎಂದು ಜನತೆಗೆ ರಾಷ್ಟ್ರಪತಿ ಕರೆ ನೀಡಿದ್ದಾರೆ. 
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com