ಹೈದರಾಬಾದ್: ವಾರ್ಷಿಕವಾಗಿ 10 ಲಕ್ಷ ರೂಪಾಯಿ ಆದಾಯ ಹೊಂದಿರುವ ಬಳಕೆದಾರರಿಗೆ ಎಲ್‌ಪಿಜಿ ಸಿಲಿಂಡರ್ ಮೇಲಿನ ಸಬ್ಸಿಡಿ ನಿಲ್ಲಿಸಲು ಕೇಂದ್ರ ಸರಕಾರ ಆಲೋಚಿಸುತ್ತಿದೆ ಎಂದು ಕೇಂದ್ರ ಸಚಿವ ಎಂ ವೆಂಕಯ್ಯನಾಯ್ಡು ಹೇಳಿದ್ದಾರೆ.
"ಅಕ್ರಮ ಅಡುಗೆ ಅನಿಲ ಸಂಪರ್ಕಗಳನ್ನು ಪತ್ತೆ ಹಚ್ಚಿರುವುದಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಈ ಅಕ್ರಮ ಬಳಕೆದಾರರಿಗೆ ಸಹಾಯಧನವಿರುವ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯನ್ನು ನಿಲ್ಲಿಸಿದರೆ ಹಲವು ಸಾವಿರ ಕೋಟಿ ರೂ.ಗಳನ್ನು ಉಳಿಸಲು ಸಾಧ್ಯವಿದೆ' ಎಂದು ಸಚಿವ ನಾಯ್ಡು ತಿಳಿಸಿದರು.
10 ಲಕ್ಷಕ್ಕಿಂತ ಹೆಚ್ಚಿಗೆ ಆದಾಯ ಇರುವವರಿಗೆ ಯಾಕೆ ಸಬ್ಸಿಡಿ ಬೇಕು. ಜೊತೆಗೆ ಸಚಿವರಿಗೆ ಯಾಕೆ ಗ್ಯಾಸ್ ಸಬ್ಸಿಡಿ ಬೇಕು ? ಈ ತನಕ 30 ಲಕ್ಷ ಬಳಕೆದಾರರು ಗ್ಯಾಸ್ ಸಬ್ಸಿಡಿ ಬಿಟ್ಟುಕೊಟ್ಟಿದ್ದಾರೆ. ಆ ಸಬ್ಸಿಡಿಯನ್ನು ಬಡವರಿಗಾಗಿ ಬಳಸಲಾಗುವುದು ಎಂದು ವೆಂಕಯ್ಯ ನಾಯ್ಡು ಅವರು ಆಂಧ್ರಪ್ರದೇಶ ಮತ್ತು ತೆಲಂಗಾಣ ಚೇಂಬರ್ ಆಫ್ ಕಾಮರ್ಸ್ ಸಭೆಯಲ್ಲಿ ಹೇಳಿದರು.
Advertisement