
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ವಿರುದ್ಧ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಮಹಾಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕರಾಗಿ ಶನಿವಾರ ನಿತಿಶ್ ಕುಮಾರ್ ಅವರು ಆಯ್ಕೆಯಾಗಿದ್ದು,
ಇಂದು ನಡೆದ ಜೆಡಿಯು, ಆರ್‌ಜೆಡಿ ಹಾಗೂ ಕಾಂಗ್ರೆಸ್ ಮಹಾಮೈತ್ರಿಕೂಟ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರ್ ಜೆಡಿ ಸಂಸದೀಯ ಮಂಡಳಿಯ ಅಧ್ಯಕ್ಷೆ ರಾಬ್ಡಿ ದೇವಿ ಅವರು 64 ವರ್ಷದ ನಿತಿಶ್ ಕುಮಾರ್ ಅವರ ಹೆಸರು ಸೂಚಿಸಿದರು. ಇದಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯಾದರ್ಶಿ ಸಿಪಿ ಜೋಶಿ ಅವರು ಬೆಂಬಲ ಸೂಚಿಸಿದರು. ಈ ವೇಳೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿದಂತೆ ಮೂರು ಪಕ್ಷಗಳು ಶಾಸಕರು ಹಾಜರಿದ್ದರು.
ಇದಕ್ಕೂ ಮುನ್ನ ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತಿಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿತ್ತು.
ನಿತೀಶ್ ಕುಮಾರ್ ಅವರು ಇಂದು ಬೆಳಗ್ಗೆ ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅಲ್ಲದೆ ಪ್ರಸಕ್ತ ವಿಧಾನಸಾಭೆಯನ್ನು ವಿಸರ್ಜಿಸಲು ಕೋರಿದ್ದರು.
Advertisement