ಜೆಡಿಯು ಶಾಸಕಾಂಗ ಪಕ್ಷದ ನಾಯಕನಾಗಿ ನಿತಿಶ್ ಕುಮಾರ್ ಆಯ್ಕೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಎರಡೇ ಗಂಟೆಗಳಲ್ಲಿ ಮತ್ತೆ ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತಿಶ್ ಕುಮಾರ್....
ನಿತಿಶ್ ಕುಮಾರ್
ನಿತಿಶ್ ಕುಮಾರ್
Updated on: 

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಎರಡೇ ಗಂಟೆಗಳಲ್ಲಿ ಮತ್ತೆ ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತಿಶ್ ಕುಮಾರ್ ಅವರು ಶನಿವಾರ ಆಯ್ಕೆಯಾಗಿದ್ದಾರೆ.

ನಂತರ ಜೆಡಿಯು, ಆರ್‌ಜೆಡಿ ಹಾಗೂ ಕಾಂಗ್ರೆಸ್ ಮಹಾಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕರಾಗಿ ನಿತಿಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗುತ್ತದೆ.

ಇತ್ತೀಚಿಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ನಿತಿಶ್ ನೇತೃತ್ವದ ಮಹಾಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿತ್ತು.

ಔಪಚಾರಿಕವಾಗಿ ನಿತಿಶ್ ಕುಮಾರ್ ಅವರನ್ನು ಮತ್ತೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಯು ರಾಜ್ಯಾಧ್ಯಕ್ಷ ವಶಿಷ್ಠ ನರೇನ್ ಅವರು ಹೇಳಿದ್ದಾರೆ.

ನಿತೀಶ್ ಕುಮಾರ್ ಇಂದು ಬೆಳಗ್ಗೆ  ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅಲ್ಲದೆ ಪ್ರಸಕ್ತ ವಿಧಾನಸಾಭೆಯನ್ನು ವಿಸರ್ಜಿಸಲು ಕೋರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com