ನವೆಂಬರ್ 20ಕ್ಕೆ ನಿತೀಶ್ ಕುಮಾರ್ ಪ್ರಮಾಣ ವಚನ ಸಮಾರಂಭ

ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ನವೆಂಬರ್ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ....
ನಿತೀಶ್ ಕುಮಾರ್
ನಿತೀಶ್ ಕುಮಾರ್
Updated on: 

ಪಾಟ್ನಾ: ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ನವೆಂಬರ್ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ 64 ವರ್ಷದ ನಿತೀಶ್ ಕುಮಾರ್ ಅವರನ್ನು ತದನಂತರ ಮಹಾಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆರಿಸಲಾಗಿತ್ತು. ಬಳಿಕ ಸರ್ಕಾರ ರಚನೆಯ ಹಕ್ಕು ಮಂಡಿಸಲು ಅವರು ರಾಜಭವನಕ್ಕೆ ತೆರಳಿದ್ದರು.

ರಾಜ್ಯಪಾಲ ರಾಮನಾಥ್ ಕೋವಿಂದ್ ಅವರ ಜತೆಗೆ ಸುಮಾರು 45 ನಿಮಿಷಗಳ ಮಾತುಕತೆಯ ಬಳಿಕ ನಿತೀಶ್ ಕುಮಾರ್ ಅವರು ಸುದ್ದಿಗಾರರ ಜತೆ ಮಾತನಾಡಿದರು. ನವೆಂಬರ್ 20ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪ್ರಕಟಿಸಿದರು.

ಅಲ್ಲದೇ, ಮಹಾಮೈತ್ರಿಕೂಟದಲ್ಲಿರುವ ‌ಜೆಡಿಯು, ಆರ್‌ಜೆಡಿ ಹಾಗೂ ಕಾಂಗ್ರೆಸ್–ಮೂರು ಪಕ್ಷಗಳು ಸಂಪುಟದಲ್ಲಿ ಪಾಲ್ಗೊಳ್ಳಲಿವೆ ಎಂದರು. ನವೆಂಬರ್‌ 20ರಂದು ಎಷ್ಟು ಜನರು ಸಚಿವರು ಸಂಪುಟ ಸೇರಲಿದ್ದಾರೆ ಎಂಬ ಪ್ರಶ್ನೆಗೆ ಅವರು ‘ಬಿಹಾರ ವಿಧಾನಸಭೆಯ ಸಚಿವರ ಗರಿಷ್ಠ ಸಂಖ್ಯೆ 36’ ಎಂದು ನುಡಿದರು. ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ಆಹ್ವಾನ ನೀಡಲಾಗುವುದೇ ಎಂಬ ಪ್ರಶ್ನೆಗೆ ‘ಈ ಕುರಿತು ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com