ದಕ್ಷಿಣ ಭಾರತದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮೂರು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮೂರು ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. 
ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಪುದುಚೆರಿ ಮತ್ತು ಕರ್ನಾಟಕದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. 
ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಇಂದು ಬೆಳಗ್ಗಿನಿಂದಲೇ ಆಗಾಗ್ಗೆ ತುಂತುರು ಮಳೆ ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈಗಾಗಲೇ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ.
ಇನ್ನು ಕರ್ನಾಟಕ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com