ಮೌನ ಮುರಿದು ಅಸಹಿಷ್ಣುತೆಯ ವಿರುದ್ಧ ಧ್ವನಿ ಎತ್ತಿದ ಬಿಗ್ ಬಿ

ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯ ವಿರುದ್ಧ ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ಧ್ವನಿ...
ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್
Updated on: 
ಮುಂಬೈ: ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯ ವಿರುದ್ಧ ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ಧ್ವನಿ ಎತ್ತಿದ್ದಾರೆ.
ಕೋಲ್ಕತ್ತದಲ್ಲಿ 21ನೇ ಅಂತಾರಾಷ್ಟ್ರೀಯ ಕೋಲ್ಕತ್ತಾ ಫಿಲ್ಮ್ ಫೆಸ್ಟಿವಲ್ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಸಂಸ್ಕೃತಿಗಳು ಪ್ರಶ್ನೆಸಲ್ಪಟ್ಟಾಗ ಹಾಗೂ ಮತ್ತೊಂದು ಸಮುದಾಯದ ಬಗ್ಗೆ ಪೂರ್ವಾಗ್ರಹಪೀಡಿತ ಭಾವನೆಗಳನ್ನು ಹೊಂದಿದ್ದಾಗ ಜಗತ್ತು ಇಬ್ಭಾಗಗೊಳ್ಳುತ್ತವೆ ಎಂದಿದ್ದಾರೆ.
ಭಾರತೀಯ ಚಿತ್ರರಂಗವು ತನ್ನ ಆರಂಭದ ದಿನಗಳಿಂದಲೂ ಕೋಮುಪೀಡಿತ ಧ್ವೇಷ ಭಾವನೆಗಳನ್ನು ನಿರ್ಮೂಲನೆಗೊಳಿಸುವ ಪ್ರಯತ್ನ ಮಾಡಿದೆ ಎಂದು ಅವರು ಹೇಳಿದ್ದಾರೆ. 
ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯ ವಿರುದ್ಧ ಬಾಲಿವುಡ್ ನಟ ಶಾರುಕ್ ಖಾನ್ ಮಾತನಾಡಿ ಬಿಜೆಪಿ ಸಂಸದರ ಕೆಂಗಣ್ಣಿಗೆ ಗುರಿಯಾದ ಬೆನ್ನಿಗೆ ಇದೀಗ ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಅಸಹಿಷ್ಣುತೆಯ ವಿರುದ್ಧ ಧ್ವನಿಗೂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com