ಅಶೋಕ್ ಸಿಂಘಾಲ್
ದೇಶ
ವಿಎಚ್ ಪಿ ನಾಯಕ ಅಶೋಕ್ ಸಿಂಘಾಲ್ ನಿಧನ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಅಶೋಕ್ ಸಿಂಘಾಲ್ ಅವರು ಮಂಗಳವಾರ...
ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಅಶೋಕ್ ಸಿಂಘಾಲ್ ಅವರು ಮಂಗಳವಾರ ನಿಧನರಾಗಿದ್ದಾರೆ.
ಹೃದಯ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಘಾಲ್ ಅವರನ್ನು ನವೆಂಬರ್ 14ರಂದು ಗುರಗಾಂವ್ ನ ಮೇಧಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಕಳೆದ 20 ವರ್ಷಗಳಿಂದ ವಿಎಚ್ ಪಿ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿದ್ದ 89 ವರ್ಷದ ಸಿಂಘಾಲ್ ಅವರು ವಿಧವಶರಾಗಿದ್ದಾರೆ ಎಂದು ವಿಎಚ್ ಪಿ ನಾಯಕ ಪ್ರವೀಣ ತೋಗಾಡಿಯಾ ಅವರು ತಿಳಿಸಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹಾಗೂ ಬಿಜೆಪಿ ಪ್ರಧಾನ ಕಾರ್ಯಾದರ್ಶಿ ರಾಮ್ ಲಾಲ್ ಅವರು ಕಳೆದ ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ಸಿಂಘಾ ಅವರ ಆರೋಗ್ಯ ವಿಚಾರಿಸಿದ್ದರು.

