ಶೇ.15ರಷ್ಟು ವೇತನ ಹೆಚ್ಚಳ?

ಕೇಂದ್ರ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗ ಗುರುವಾರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ...
ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ (ಸಂಗ್ರಹ ಚಿತ್ರ)
ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ (ಸಂಗ್ರಹ ಚಿತ್ರ)

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗ ಗುರುವಾರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಈ ಬಾರಿ ಶೇ.15ರಷ್ಟು ವೇತನ ಹೆಚ್ಚಿಸಲು ಆಯೋಗ ಶಿಫಾರಸು ಮಾಡಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. 2008ರಲ್ಲಿ ರಚಿಸಿದ್ದ ಆರನೆ ವೇತನ ಆಯೋಗ ಶೇ.35ರಷ್ಟು ವೇತನ ಹೆಚ್ಚಿಸಲು  ಶಿಫಾರಸು ಮಾಡಿತ್ತು. ಇದಕ್ಕೆ ಹೋಲಿಸಿದರೆ ಏಳನೆ ವೇತನ ಆಯೋಗದ ಶಿಫಾರಸು ತುಂಬಾ ಕಡಿಮೆಯಾಯಿತು ಎಂತಲೇ ಹೇಳಬಹುದು. ಕೇಂದ್ರ ಸರ್ಕಾರಿ ನೌಕರರ ವೇತನ ಶೇ.15ರಷ್ಟು  ಹೆಚ್ಚಿಸಿದರೂ ವೇತನ ಬಾಬತ್ತು ರು.25 ಸಾವಿರ ಕೋಟಿಗೆ ತಲುಪಲಿದೆ. ದೇಶದ ಒಟ್ಟಾರೆ ಜಿಡಿಪಿಯ ಶೇ.0.2ರಷ್ಟಾಗಿದೆ. ಈ ಶಿಫಾರಸು ಕುರಿತು ಕೇಂದ್ರ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ  ನಂತರವೇ ಜಾರಿಗೆ ಬರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com