ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಕರ್ನಲ್ ಸಂತೋಶ್ ಮಹದಿಕ್ ಅಂತ್ಯಕ್ರಿಯೆ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಶ್ ಮಹದಿಕ್ ಅವರ ಅಂತ್ಯಕ್ರಿಯೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದೆ.
ಕರ್ನಲ್ ಸಂತೋಶ್ ಮಹದಿಕ್
ಕರ್ನಲ್ ಸಂತೋಶ್ ಮಹದಿಕ್
Updated on: 

ಸತಾರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಶ್ ಮಹದಿಕ್ ಅವರ ಅಂತ್ಯಕ್ರಿಯೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದೆ.
ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಗಣ್ಯರು ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಸಾರ್ವಜನಿಕ ದರ್ಶನಕ್ಕಾಗಿ ಸಂತೋಶ್ ಅವರ ಹುಟ್ಟೂರಾದ ಪೊಗರ್ವಾಡಿಯಲ್ಲಿ ಇರಿಸಲಾಗಿದ್ದ ಪಾರ್ಥಿವ ಶರೀರಕ್ಕೆ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಸಂತೋಶ್ ಅವರ ಅಂತ್ಯಕ್ರಿಯೆ ನಡೆಯಿತು.
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ  ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. 41 ರಾಷ್ಟ್ರೀಯ ರೈಫಲ್ಸ್ ನ ಕಮಾಂಡಿಂಗ್ ಅಧಿಕಾರಿಯಾಗಿದ್ದ ಕರ್ನಲ್ ಮಹದಿಕ್ (38 ) ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು. ಸತಾರಾ ಮೂಲದ ರೈತ ಕುಟುಂಬದ ಹಿನ್ನೆಲೆಯುಳ್ಳ ಕರ್ನಲ್ ಸಂತೋಶ್ 1998 ರಲ್ಲಿ ಸೇನೆ ಸೇರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com