ನವದೆಹಲಿ: ಪಾಕ್ ಮಾಧ್ಯಮಗಳ ಮುಂದೆ ಮಣಿಶಂಕರ್ ಅಯ್ಯರ್ ನೀಡಿರುವ ಹೇಳಿಕೆ ದೇಶದ್ರೋಹಕ್ಕೆ ಸಂಬಂಧಿಸಿದ್ದಾಗಿದ್ದು, ಕಾಂಗ್ರೆಸ್ ವರಿಷ್ಠೆ ಸೋನಿಯಾ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಖುರ್ಷಿದ್ ಅವರು, ಪಾಕಿಸ್ತಾನದೆಡೆಗಿನ ಭಾರತದ ಕಠಿಣ ನಿಲುವನ್ನು ಅಲ್ಲಿನ ಮಾಧ್ಯಮಗಳಲ್ಲಿ ಟೀಕಿಸಿದ್ದರು. ಅಯ್ಯರ್ ಅವರು, ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ತೆಗೆಯದ ಹೊರತು ಎರಡೂ ದೇಶಗಳ ಮಾತುಕತೆ ಆರಂಭವಾಗುವುದೇ ಇಲ್ಲ ಎಂದಿದ್ದರು.
ಈ ಹೇಳಿಕೆಗಳನ್ನು ಪ್ರಸ್ತಾಪಿಸಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹಾಗೂ ಪ್ರಕಾಶ್ ಜಾವಡೇಕರ್ ಅವರು, ಕಾಂಗ್ರೆಸ್ ಪಕ್ಷವು ಈ ಇಬ್ಬರು ನಾಯಕರ ಹೇಳಿಕೆಗಳನ್ನು ಖಂಡಿಸಬೇಕು ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸೋನಿಯಾ ಅವರು ಈ ಸಂಬಂಧ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.