5ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ನಿತಿಶ್ ಕುಮಾರ್ ಪ್ರಮಾಣ
ಪಾಟ್ನಾ: ಜೆಡಿಯು ನಾಯಕ ನಿತಿಶ್ ಕುಮಾರ್ ಅವರು 5ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.
ಇಂದು ಮಧ್ಯಾಹ್ನ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಬಿಹಾರ ರಾಜ್ಯಪಾಲ ಕೇಶರಿನಾಥ್ ತ್ರಿಪಾಠಿ ಅವರು ನಿತಿಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ನಿತಿಶ್ ಕುಮಾರ್ ಅವರೊಂದಿಗೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರರಾದ ತೇಜಶ್ವಿ ಯಾದವ್ ಹಾಗೂ ತೇಜ್ ಪ್ರತಾಪ್ ಯಾದವ್, ರಾಮ್ ವಿಚಾರ್ ರೈ, ಶಿವಚಂದ್ರ ರಾಮ್, ಶೈಲೇಶ್ ಕುಮಾರ್, ಮಂಜು ವರ್ಮಾ ಮತ್ತು ಸಂತೋಷ್ ನಿರಳ, ಅಲೋಕ್ ಕುಮಾರ್, ಜೈ ಕಮಾರ್ ಸಿಂಗ್, ಬಿಜೇಂದ್ರ ಪ್ರಸಾದ್ ಯಾದವ್, ಅಬ್ದುಲ್ ಬರಿ ಸಿದ್ದಿಖೀ ಅವರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 9 ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ