ನಿತೀಶ್ ಪ್ರಮಾಣ ವಚನಕ್ಕೆ ಕ್ಷಣಗಣನೆ: ವ್ಯಾಪಕ ಭಧ್ರತೆ

ಬಿಹಾರದ ಮುಖ್ಯಮಂತ್ರಿಯಾಗಿ 5ನೇ ಬಾರಿಗೆ ನಿತೀಶ್ ಕುಮಾರ್ ಅವರ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ...

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ 5ನೇ ಬಾರಿಗೆ ನಿತೀಶ್ ಕುಮಾರ್ ಅವರ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯಲಿರುವ  ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.

ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಆಗಮಿಸುವ ನಿರೀಕ್ಷಿ ಇದೆ. ಇನ್ನು ಈ ಬೃಹತ್  ಕಾರ್ಯಕ್ರಮಕ್ಕೆ ಕಾಂಗ್ರೆಸ್, ಆರ್ ಜೆಡಿ ಮತ್ತು ಜೆಡಿಯು ಪಕ್ಷಗಳ ಪ್ರಮುಖರು ಸೇರಿದಂತೆ ದೇಶದ 8 ಮುಖ್ಯಮಂತ್ರಿಗಳು ಹಾಜರಾಗಲಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ವ್ಯಾಪಕ ಭದ್ರತೆ  ಒದಗಿಸಲಾಗಿದ್ದು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಇತರೆ ಪಕ್ಷಗಳ ಮುಖಂಡರಿಗೆ ಜಡ್ ಪ್ಲಸ್ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಗಾಂಧಿ ಮೈದಾನದ ಸುತ್ತಮುತ್ತ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದ್ದು, 3000 ಸಾವಿರ ಪೊಲೀಸ್ ಸಿಬ್ಬಂದಿಗಳು ಕಾರ್ಯ ನಿರತರಾಗಿದ್ದಾರೆ. ಇದಲ್ಲದೆ 30 ಡಿಎಸ್ ಪಿಗಳು ಮತ್ತು ಎಸ್  ಪಿ ಶ್ರೇಣಿಯ ಅಧಿಕಾರಿಗಳು ಭದ್ರತೆ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಪ್ರಮಾಣವಚನ ಕಾರ್ಯಕ್ರಮ ನಡೆಯುವ ಗಾಂಧಿ ಮೈದಾನದ ಸುತ್ತಮುತ್ತ ಸುಮಾರು 20ಕ್ಕೂ ಹೆಚ್ಚು ವಾಚ್  ಟವರ್ ಗಳ ನಿರ್ಮಾಣ ಮಾಡಲಾಗಿದ್ದು, 40 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com