ಟಿವಿ ಉದ್ಯಮಿ ಪೀಟರ್ ಮುಖರ್ಜಿ ವಿರುದ್ಧ ಕೊಲೆ ಪ್ರಕರಣ ದಾಖಲು

ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಟಿವಿ...
ಇಂದ್ರಾಣಿ ಮುಖರ್ಜಿ, ಪೀಟರ್ ಮುಖರ್ಜಿ
ಇಂದ್ರಾಣಿ ಮುಖರ್ಜಿ, ಪೀಟರ್ ಮುಖರ್ಜಿ
Updated on: 

ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಟಿವಿ ವಾಹಿನಿಯ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಮುಖರ್ಜಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

ಶೀನಾ ಬೋರಾ ಕೊಲೆ ಪ್ರಕರಣ ಸಂಬಂಧ ಮುಖರ್ಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಸಿಬಿಐ, ಮಾಧ್ಯಮ ದೊರೆಯ ವಿರುದ್ಧ ಕೊಲೆ ಯತ್ನ, ಅಪಹರಣ ಹಾಗೂ ಅಪರಾಧಕ್ಕೆ ಸಂಚು ರೂಪಿಸಿದ ಆರೋಪ ಹೊರಿಸಲಾಗಿದೆ.

59 ವರ್ಷದ ಪೀಟರ್ ಮುಖರ್ಜಿಯ ಪತ್ನಿ ಇಂದ್ರಾಣಿ ಮುಖರ್ಜಿ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಕಳೆದ ಆಗಸ್ಟ್‌ನಲ್ಲಿ ಬಂಧಿಸಲಾಗಿತ್ತು.

ಏಪ್ರಿಲ್, 2012ರಲ್ಲಿ ಕಣ್ಮರೆಯಾಗಿದ್ದ ಶೀನಾ ಬೋರಾಳ ಶವ ಮುಂಬೈನ ರಾಯ್ ಗಢ ಅರಣ್ಯದಲ್ಲಿ ಪತ್ತೆಯಾಗಿತ್ತು. ತಾಯಿ-ಮಗಳ ಮಧ್ಯೆ ಹಣಕಾಸಿನ ಭಿನ್ನಾಭಿಪ್ರಾಯದಿಂದ ಇಂದ್ರಾಣಿ ಶೀನಾ ಬೋರಾಳನ್ನು ಹತ್ಯೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com