ನಿತೀಶ್ ಕುಮಾರ್
ದೇಶ
'ಬಿಹಾರದಲ್ಲಿ ಜಂಗಲ್ ರಾಜ್ ' ಮರುಕಳಿಸಲ್ಲ: ನಿತೀಶ್ ಕುಮಾರ್
ಬಿಹಾರದಲ್ಲಿ ಜಂಗಲ್ ರಾಜ್ ಆಡಳಿತ ಮತ್ತೆ ಮರುಕಳಿಸುವುದಿಲ್ಲ ಎಂದು ನೂತನ ಮುಖ್ಯಮಂತ್ರಿ ನಿತೀಶ್ ಕುಮಾರ್ ಭರವಸೆ ನೀಡಿದ್ದಾರೆ....
ಪಾಟ್ನಾ: ಬಿಹಾರದಲ್ಲಿ ಜಂಗಲ್ ರಾಜ್ ಆಡಳಿತ ಮತ್ತೆ ಮರುಕಳಿಸುವುದಿಲ್ಲ ಎಂದು ನೂತನ ಮುಖ್ಯಮಂತ್ರಿ ನಿತೀಶ್ ಕುಮಾರ್ ಭರವಸೆ ನೀಡಿದ್ದಾರೆ.
ನಿನ್ನೆ ಬಿಹಾರ 3 ನೇ ಬಾರಿಗೆ ಪೂರ್ಣ ಅವಧಿಯ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು ಜಂಗಲ್ ರಾಜ್ ಭಯದಲ್ಲಿ ಬದುಕುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಟ್ಟು ನಿಟ್ಟಿಗೆ ಜಾರಿಗೆ ತರುವಲ್ಲಿ ಯಾವುದೇ ರೀತಿಯ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಹೇಳಿರುವ ನಿತೀಶ್ ಕುಮಾರ್, ಆರಂಭದಲ್ಲಿ ನಾವು ಯಾವ ತತ್ವ ಸಿದ್ಧಾಂತಗಳನ್ನು ಇಟ್ಟುಕೊಂಡಿದ್ದೇವೋ, ಅದೇ ತತ್ವಾದರ್ಶಗಳ ಆಧಾರದ ಮೇಲೆಯೇ ಭವಿಷ್ಯದಲ್ಲಿ ಸಾಗುವುದಾಗಿ ನಿತೀಶ್ ಕುಮಾರ್ ಹೇಳಿದ್ದಾರೆ.

