
ಸಹರಾನ್‌ಪುರ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ವಿಷಯವಾಗಿ ಯಾವುದೇ ಹೆಜ್ಜೆ ಮುಂದಿಡದ ಬಿಜೆಪಿ ಜನರನ್ನು ಮತ್ತು ಭಗವಂತ ಶ್ರೀರಾಮನನ್ನೂ ಮೂರ್ಖನನ್ನಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಇಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂದಿರ ನಿರ್ಮಾಣ ಮಾಡಬೇಕು, ಮಾಡುವುದುಬೇಡ ಎಂಬ ದ್ವಂದ್ವ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿ ರಾಮ ಮಂದಿರದ ಹೆಸರಲ್ಲಿ ಜನತೆಯನ್ನು ಮೂರ್ಖರನ್ನಾಗಿಸುತ್ತಿದೆ ಎಂದು ಶುಕ್ಲಾ ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷತ್ ನ ದಿವಂಗತ ನಾಯಕ ಅಶೋಕ್ ಸಿಂಘಾಲ್ ಶ್ರದ್ಧಾಂಜಲಿ ಸಭೆಯಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಗೆ ಶುಕ್ಲಾ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ಬಗ್ಗೆ ನಾವು ಗಂಭೀರ ಪ್ರಯತ್ನಗಳನ್ನು ನಡೆಸಬೇಕಾಗಿದೆ. ಅಶೋಕ್ ಜೀ ಯವರ ವಿಚಾರ ನಮಗೆ ಮಾರ್ಗದರ್ಶಕವಾಗಿದೆ. ರಾಮ ಮಂದಿರ ನಿರ್ಮಾಣವಾದಲ್ಲಿ ಅಶೋಕ್ ಜೀ ಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಮೋಹನ್ ಭಾಗವತ್ ಹೇಳಿದ್ದರು.
Advertisement