ಶೀನಾ ಪ್ರಕರಣ: ವಿಚಾರಣೆಗಾಗಿ ಪೀಟರ್ ಮುಖರ್ಜಿ ದೆಹಲಿಗೆ

ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಇಂದ್ರಾಣಿ ಮುಖರ್ಜಿ ಅವರ ಪತಿ ಪೀಟರ್‌ ಮುಖರ್ಜಿಯವರನ್ನು ವಿಚಾರಣೆಗಾಗಿ ದೆಹಲಿಗೆ ಕರೆತಂದಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...
ಇಂದ್ರಾಣಿ ಮುಖರ್ಜಿ, ಪೀಟರ್ ಮುಖರ್ಜಿ
ಇಂದ್ರಾಣಿ ಮುಖರ್ಜಿ, ಪೀಟರ್ ಮುಖರ್ಜಿ
Updated on: 

ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಇಂದ್ರಾಣಿ ಮುಖರ್ಜಿ ಅವರ ಪತಿ ಪೀಟರ್‌ ಮುಖರ್ಜಿಯವರನ್ನು ವಿಚಾರಣೆಗಾಗಿ ದೆಹಲಿಗೆ ಕರೆತಂದಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೀಟರ್ ಮುಖರ್ಜಿ ಅವರ ಪಾತ್ರವಿರುವಂತೆ ಹಲವು ಶಂಕೆಗಳು ವ್ಯಕ್ತವಾಗಿದ್ದವು. ತನಿಖೆ ವೇಲೆ ಪೀಟರ್ ಮುಖರ್ಜಿಯವರು ಹೇಳಿಕೆ ನೀಡುವಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿರುವುದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾಧಿಕಾರಿಗಳು ಪೀಟರ್ ಮುಖರ್ಜಿಯವರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದರು.

ಏಪ್ರಿಲ್, 2012ರಲ್ಲಿ ಕಣ್ಮರೆಯಾಗಿದ್ದ ಶೀನಾ ಬೋರಾಳ ದೇಹ ಮುಂಬೈನ ರಾಯ್ ಗಢ ಅರಣ್ಯದಲ್ಲಿ ಪತ್ತೆಯಾಗಿತ್ತು. ಶೀನಾ ಹತ್ಯೆಗೆ ತಾಯಿ-ಮಗಳ ಮಧ್ಯೆ ಇರುವ ಹಣಕಾಸಿನ ಭಿನ್ನಾಭಿಪ್ರಾಯದಿಂದ ಇಂದ್ರಾಣಿ ಶೀನಾ ಬೋರಾಳನ್ನು ಹತ್ಯೆ ಮಾಡಿದ್ದಾರೆಂದು ಹೇಳಲಾಗುತ್ತಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ ಅಧಿಕಾರಿಗಳು ಶೀನಾ ಹತ್ಯೆಗೆ ಹಣಕಾಸಿನ ವ್ಯವಹಾರವೇ ಕಾರಣ ಎಂದು ಸೋಮವಾರ ನ್ಯಾಯಾಲಯಕ್ಕೆ ತಿಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com