ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಮುಂದುವರಿದ ಮಧ್ಯಂತರ ತಡೆಯಾಜ್ಞೆ

ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮತ್ತೆ ಸುಪ್ರೀಂಕೋರ್ಟ್ ಗುರುವಾರ ಮುಂದುವರೆಸಿದೆ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)

ನವದೆಹಲಿ: ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮತ್ತೆ ಸುಪ್ರೀಂಕೋರ್ಟ್ ಗುರುವಾರ ಮುಂದುವರೆಸಿದೆ.

2014ರ ಲೋಕಸಭೆ ಚುನಾವಣೆ ರ್ಯಾಲಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಅವರನ್ನು ಕೊಂದಿದ್ದಕ್ಕೆ ಆರ್ ಎಸ್ಎಸ್ ಜವಾಬ್ದಾರಿಯುತವಾಗಿದೆ ಎಂದು ರಾಹುಲ್ ಗಾಂಧಿ ಅವರು ಬಹಿರಂಗವಾಗಿ ಆರೋಪ ವ್ಯಕ್ತಪಡಿಸಿದ್ದರು. ಹೀಗಾಗಿ ಆರ್ ಎಸ್ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬುವವರು ಭಿವಂಡಿ ನ್ಯಾಯಾಲಯದಲ್ಲಿ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಮೊಕದ್ದಮೆಯನ್ನು ಕ್ರಿಮಿನಲ್ ಬದಲು ಸಿವಿಲ್ ಪ್ರಕರಣ ಎಂದು ಪರಿಗಣಿಸುವಂತೆ ಕೋರಿ ರಾಹುಲ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣ ಕುರಿತಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶ ದೀಪಕ್ ಮಿಶ್ರಾ ಹಾಗೂ ಪ್ರಫುಲ್ಲ ಚಂದ್ರ ಪಂತ್ ಅವರದಿದ್ದ ಪೀಠ ಪ್ರಕರಣ ಕುರಿತಂತೆ ಆರ್ ಎಸ್ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಅವರು 4 ವಾರದ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಕಾಲವಕಾಶ ನೀಡಿದೆ. ಅಲ್ಲದೆ, ಈ ಹಿಂದೆ ರಾಹುಲ್ ಗಾಂಧಿಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮುಂದುರೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com