ದೇಶ

ಬಿಹಾರದಲ್ಲಿ ಮದ್ಯ ನಿಷೇಧಕ್ಕೆ ನಿತೀಶ್ ಸರ್ಕಾರದ ಆದೇಶ: ಏ.1 ರಿಂದ ಜಾರಿ

ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸರ್ಕಾರ ಬಿಹಾರದಲ್ಲಿ ಮದ್ಯ ನಿಷೇಧ ಮಾಡಿದೆ.

ಬಿಹಾರದಲ್ಲಿ ಮದ್ಯ ನಿಷೇಧಕ್ಕೆ ನಿತೀಶ್ ಸರ್ಕಾರದ ಆದೇಶ: ಏ.1 ರಿಂದ ಜಾರಿ
ಮದ್ಯ ನಿಷೇಧ(ಸಾಂಕೇತಿಕ ಚಿತ್ರ)
Published On :

ಪಾಟ್ನಾ: ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸರ್ಕಾರ ಬಿಹಾರದಲ್ಲಿ ಮದ್ಯ ನಿಷೇಧ ಮಾಡಿದೆ.
ನ.26 ರಂದು ಜೆಡಿಯು ಸರ್ಕಾರ ಮದ್ಯ ನಿಷೇಧ ಆದೇಶ ಹೊರಡಿಸಿದ್ದು, 2016  ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ಜೆಡಿಯು ಪಕ್ಷ ಬಿಹಾರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮದ್ಯ ನಿಷೇಧ ಮಾಡುವುದಾಗಿ ನಿತೀಶ್ ಕುಮಾರ್ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದರು.
ಪ್ರಣಾಳಿಕೆ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಬಿಹಾರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ನ.23 ರಂದು ಬಿಹಾರ ಅಬಕಾರಿ ಸಚಿವ ಅಬ್ದುಲ್ ಜಲಿಲ್ ಹೇಳಿದ್ದರು.  ಸರ್ಕಾರ ಕೈಗೊಳ್ಳಲಿರುವ ಕ್ರಮದ ಪರಿಣಾಮ ಆರು ತಿಂಗಳಲ್ಲಿ ಗೋಚರವಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಪುರುಷರು ಅತಿಯಾಗಿ ಮದ್ಯ ಸೇವಿಸುವುದೂ ಕಾರಣವಾಗಿದ್ದು ಬಿಹಾರದಲ್ಲಿರುವ ದಲಿತ ಮಹಿಳೆಯರು ಮದ್ಯ ನಿಷೇಧಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದರು, ಈ ಹಿನ್ನೆಲೆಯಲ್ಲಿ ಮದ್ಯ ನಿಷೇಧ ಮಾಡಿರುವುದಾಗಿ ಸರ್ಕಾರದ ಪ್ರಕಟಣೆ ತಿಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.