ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಂಜಾಬ್ ಕಾಂಗ್ರೆಸ್ ನೂತನ ಮುಖ್ಯಸ್ಥ

ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಪಂಜಾಬ್ ರಾಜ್ಯ ಕಾಂಗ್ರೆಸ್ ನ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ...
ಅಮರೀಂದರ್ ಸಿಂಗ್
ಅಮರೀಂದರ್ ಸಿಂಗ್
Updated on
ನವದೆಹಲಿ: ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಪಂಜಾಬ್ ರಾಜ್ಯ ಕಾಂಗ್ರೆಸ್ ನ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.
ಗುರುವಾರ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಪ್ರತಾಪ್ ಸಿಂಗ್ ಬಜ್ವಾ ಅವರು ರಾಜಿನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಮೃತಸರದ ಪಕ್ಷದ ಶಾಸಕ ಅವರೀಂದರ್ ಸಿಂಗ್ ಅವರಿಗೆ ರಾಜ್ಯ ಅಧ್ಯಕ್ಷ ಸ್ಥಾನ ಲಭಿಸಿದೆ. 
2017ರಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕೆಲ ಬದಲಾವಣೆಗಳನ್ನು ಕಾಂಗ್ರೆಸ್ ಮಾಡಿದೆ. ಇನ್ನು ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಂಬಿಕಾ ಸೋನಿ ಅವರು ನೇಮಕಗೊಂಡಿದ್ದಾರೆ.
ಪಂಜಾಬ್ ವಿಧಾನಸಭೆ ಚುನಾವಣೆ ಸಂಬಂಧ ರಾಜ್ಯದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹಲವು ರ್ಯಾಲಿಗಳನ್ನು ನಡೆಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com