ಶೀನಾ ಕೊಲೆ ಪ್ರಕರಣ: ಪೀಟರ್‌ ಮುಖರ್ಜಿಗೆ ಸುಳ್ಳು ಪತ್ತೆ ಪರೀಕ್ಷೆ

ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಟಿವಿ ವಾಹಿನಿಯ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಮುಖರ್ಜಿ ಅವರನ್ನು ಶನಿವಾರ ಸಿಬಿಐ ಸುಳ್ಳು...
ಪೀಟರ್‌ ಮುಖರ್ಜಿ
ಪೀಟರ್‌ ಮುಖರ್ಜಿ

ನವದೆಹಲಿ: ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಟಿವಿ ವಾಹಿನಿಯ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಮುಖರ್ಜಿ ಅವರನ್ನು ಶನಿವಾರ ಸಿಬಿಐ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಿತು.

ಇಂದು ಬೆಳಗ್ಗೆ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಪೀಟರ್ ಮುಖರ್ಜಿಯನ್ನು ಸುಳ್ಳು ಪತ್ತೆ ಪರೀಕ್ಷೆ ಒಳಪಡಿಸಲಾತಿಯು.‌ ಪರೀಕ್ಷೆ ವೇಳೆ ಪೀಟರ್ ಗೆ ಶೀನಾ ಕೊಲೆ, ಅವರ ಪತ್ನಿ ಇಂದ್ರಾಣಿ ಮುಖರ್ಜಿ ಜತೆಗಿನ ಸಂವಹನ ಹಾಗೂ ಪ್ರಕರಣದ ಕುರಿತು ಅವರು ನೀಡಿರುವ ಹೇಳಿಕೆಗಳ ಬಗ್ಗೆ ತನಿಖಾಧಿಕಾರಿಗಳು ಪ್ರಶ್ನಿಸಿದರು ಎಂದು ಸಿಬಿಐ ಮೂಲಗಳು ತಿಳಿಸಿವೆ,

ಸಿಬಿಐ ಕೇಳಿದ ಕೆಲವು ಪ್ರಶ್ನೆಗಳಿಗೆ ಪೀಟರ್  ಸುಳ್ಳು ಹೇಳುತ್ತಿದ್ದಾರೆ ಎಂಬ ಅನುಮಾನ ತನಿಖಾಧಿಕಾರಿಗಳಿಗೆ ಕಾಡಿತ್ತು. ಈ ಹಿನ್ನೆಲೆಯಲ್ಲಿ ಪೀಟರ್‌ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಸಿಬಿಐ ವಿಶೇಷ ನ್ಯಾಯಾಲಯ ಅನುಮತಿ ನೀಡಿತ್ತು.

‌ಸದ್ಯ ಸಿಬಿಐ ವಶದಲ್ಲಿರುವ ಪೀಟರ್ ಮುಖರ್ಜಿ ವಿರುದ್ಧ ಕೊಲೆ ಯತ್ನ, ಅಪಹರಣ ಹಾಗೂ ಅಪರಾಧಕ್ಕೆ ಸಂಚು ರೂಪಿಸಿದ ಆರೋಪ ಹೊರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com