
ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಸಿಬ್ಬಂದಿಗಳು ಗೆರಿಲ್ಲಾ ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಸೇನೆ, ರಾಜ್ಯ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆಯಲ್ಲಿ ಗೆರಿಲ್ಲಾ ಅಡಗುತಾಣಗಳ ಮೇಲೆ ದಾಳಿ ನಡೆದಿದ್ದು, ಅರಣ್ಯ ಪ್ರದೇಶದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ಕರ್ನಲ್ ಮನೀಶ್ ಮೆಹ್ತಾ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ರಜಡಾ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗಿತ್ತು. ಇದಾದ ಬಳಿಕ ಸೇನಾ ಮೂಲಗಳ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಲಾಗಿದ್ದು, ಧಾರಾ ನಾಳದ ಬಳಿ ಗೋಣಿಚೀಲದಲ್ಲಿ ತುಂಬಿಸಲಾಗಿದ್ದ ಒಂದು ಎಕೆ-56 , 550 ಸುತ್ತುಗಳನ್ನು ಹೊಂದಿದ್ದ ಎಕೆ ಮ್ಯಾಗಜೀನ್, ಒಂದು ಗ್ರೆನೇಡ್ ಲಾಂಚರ್, ಗ್ರೆನೇಡ್ ಹಾಗೂ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ. ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿರುವುದರಿಂದ ಮತ್ತೊಮ್ಮೆ ಭಯೋತ್ಪಾದಕರ ಸಂಚು ವಿಫಲವಾದಂತಾಗಿದೆ.
Advertisement