ಕಾಶ್ಮೀರ ವಿವಾದದಲ್ಲಿ ಪಾಕಿಸ್ತಾನ ವಿಶ್ವಸಂಸ್ಥೆ ನಿರ್ಣಯಕ್ಕೆ ವಿರುದ್ಧವಾಗಿದೆ: ಓಮರ್ ಅಬ್ದುಲ್ಲಾ

ಕಾಶ್ಮೀರ ವಿಷಯದಲ್ಲಿ ವಿಶ್ವಸಂಸ್ಥೆ ನಿರ್ಣಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಅಸಂಬದ್ಧ ರೀತಿಯಲ್ಲಿ ವರ್ತಿಸುತ್ತಿದೆ
ಓಮರ್ ಅಬ್ದುಲ್ಲಾ
ಓಮರ್ ಅಬ್ದುಲ್ಲಾ

ಶ್ರೀನಗರ: ಕಾಶ್ಮೀರ ವಿಷಯದಲ್ಲಿ ವಿಶ್ವಸಂಸ್ಥೆ ನಿರ್ಣಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಅಸಂಬದ್ಧ ರೀತಿಯಲ್ಲಿ ವರ್ತಿಸುತ್ತಿದ್ದು ಆಕ್ರಮಿತ ಕಾಶ್ಮೀರವನ್ನು ಬಿಟ್ಟುಕೊಡಬೇಕು ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಹೇಳಿದ್ದಾರೆ.
ಯುಎನ್ಎಸ್ ಸಿ ನಿರ್ಣಯದ ಪ್ರಕಾರ ಮೊದಲು ಪಾಕಿಸ್ತಾನ ತಾನು ಆಕ್ರಮಿಸಿಕೊಂಡಿರುವ ಕಾಶ್ಮೀರದ ಪ್ರದೇಶವನ್ನು ಬಿಟ್ಟುಕೊಡಬೇಕೆಂಬುದನ್ನು ಕೆಲವರು ತಿಳಿದುಕೊಳ್ಳಬೇಕು ಎಂದು ಓಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.
1948 ರ ನಿರ್ಣಯದ ಪ್ರಕಾರ, ಪಾಕ್ ಆಕ್ರಮಿತ ಕಾಶ್ಮೀರದ ಪ್ರದೇಶವನ್ನು ಭಾರತಕ್ಕೆ ಬಿಟ್ಟುಕೊಡಬೇಕೆಂಬುದು ಸ್ಪಷ್ಟವಾಗಿದೆ ಎಂದು ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ. 
ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರತಿನಿಧಿ ನೀಡಿದ್ದ ಹೇಳಿಕೆಗೆ ಓಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದು ಯು.ಎನ್.ಎಸ್.ಸಿ ನಿರ್ಣಯದ ಪ್ರಕಾರ ಪಾಕಿಸ್ತಾನ ತಕ್ಷಣವೇ ಆಕ್ರಮಣಕಾರರನ್ನು ಕಾಶ್ಮೀರದಿಂದ ವಾಪಸ್ ಕರೆಸಿಕೊಳ್ಳಬೇಕಿದೆ ಎಂದು ಒತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com