ದಾದ್ರಿ ಪ್ರಕರಣ: ಮಹೇಶ್, ಓವೈಸಿಗಿಲ್ಲದ ತಡೆ ನನಗೇಕೆ ಕೇಜ್ರಿವಾಲ್ ಪ್ರಶ್ನೆ

ಗೋಮಾಂಸ ಹತ್ಯೆ ಹಾಗೂ ಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಕುಟುಂಬಕ್ಕೆ ಭೇಟಿ ನೀಡಲು ದಾದ್ರಿಗೆ ಹೋಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ಅಲ್ಲಿನ ಅಧಿಕಾರಿಗಳು ತಡೆದಿರುವ ಘಟನೆ ಶನಿವಾರ ನಡೆದಿದೆ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ)
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ)
Updated on: 

ದಾದ್ರಿ: ಗೋಮಾಂಸ ಹತ್ಯೆ ಹಾಗೂ ಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಕುಟುಂಬಕ್ಕೆ ಭೇಟಿ ನೀಡಲು ದಾದ್ರಿಗೆ ಹೋಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ಅಲ್ಲಿನ ಅಧಿಕಾರಿಗಳು ತಡೆದಿರುವ ಘಟನೆ ಶನಿವಾರ ನಡೆದಿದೆ.

ಘಟನೆ ಸಂಬಂಧ ಇಂದು ಮೃತನ ಕುಟುಂಬವನ್ನು ಭೇಟಿ ಮಾಡಲು ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದಾದ್ರಿಗೆ ಭೇಟಿ ನೀಡಲು ಹೋಗುತ್ತಿದ್ದ ಸಂದರ್ಭದಲ್ಲಿ ಅಲ್ಲಿನ ಅಧಿಕಾರಿಗಳು ಅವರನ್ನು ತಡೆದಿರುವ ವಿಷಯವನ್ನು ಸ್ವತಃ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.

ದಾದ್ರಿಗೆ ಭೇಟಿ ನೀಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳು ಹಾಗೂ ಪೊಲೀಸರು ನಮ್ಮನ್ನು ತಡೆದರು. ಇದು ಯಾವ ಕಾರಣಕ್ಕೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನಿನ್ನೆಯಷ್ಟೇ ಮಹೇಶ್ ಶರ್ಮಾ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಯಾರೊಬ್ಬರೂ ಅವರನ್ನು ತಡೆಯಲಿಲ್ಲ. ಆದರೆ, ನಮ್ಮನ್ನೇಕೆ ತಡೆದರು ಎಂದು ಪ್ರಶ್ನಿಸಿದ್ದಾರೆ. ನಾವು ಶಾಂತಿ ಹಾಗೂ ಪ್ರೀತಿಯನ್ನು ಬಯಸುವವರಾಗಿದ್ದು, ನಾನು ಮೃತ ವ್ಯಕ್ತಿ ಇಕ್ಲಾಕ್ ನ ಕುಟುಂಬವನ್ನು ಭೇಟಿ ಮಾಡಬೇಕು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com