ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆ ಮೇಲೆ ದಾಳಿ: ಓರ್ವ ಆರೋಪಿ ಬಂಧನ

ಅಪಾರ ಪ್ರಮಾಣದಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಣೆ ಮಾಡಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಅಕ್ರಮ ಶಸ್ತ್ರಾಸ್ತ್ರ(ಸಂಗ್ರಹ ಚಿತ್ರ)
ಅಕ್ರಮ ಶಸ್ತ್ರಾಸ್ತ್ರ(ಸಂಗ್ರಹ ಚಿತ್ರ)

ಕಾನ್ಪುರ: ಅಪಾರ ಪ್ರಮಾಣದಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಣೆ ಮಾಡಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು, ಓರ್ವ ವ್ಯಕ್ತಿಯನ್ನು ಬಂಧಿಸಿದ್ದು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಬಂಧಿತ ಆರೋಪಿ ಅಪರಾಧಗಳ ಹಿನ್ನೆಲೆಯುಳ್ಳವನಾಗಿದ್ದು, ಪಂಚಾಯತ್ ಚುನಾವಣೆಗಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತಿತ್ತು, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com