ವಿಧಾನಸಭಾ ಚುನಾವಣೆಯಲ್ಲಿ ಲಾಲು-ನಿತೀಶ್ ಗೆದ್ದರೆ ಬಿಹಾರ ಜಂಗಲ್ ರಾಜ್ ಆಗುತ್ತೆ: ಅಮಿತ್ ಶಾ

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆಲುವು ಸಾಧಿಸಿದರೇ ಬಿಹಾರದಲ್ಲಿ ..
ಅಮಿತ್ ಶಾ
ಅಮಿತ್ ಶಾ
Updated on: 

ಪುರ್ನಿಯಾ: ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆಲುವು ಸಾಧಿಸಿದರೇ ಬಿಹಾರದಲ್ಲಿ ಜಂಗಲ್ ರಾಜ್ -2 ನಿರ್ಮಾಣ ವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.

ಪೂರ್ನಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು ಈ ಇಬ್ಬರಿಂದ ಬಿಹಾರದಲ್ಲಿ ಯಾವುದೇ ಬದಲಾವಣೆಯಾಗಲು ಸಾಧ್ಯವಿಲ್ಲ. ಜಾತಿಯ ಹೆಸರಲ್ಲ ಸಮಾಜವನ್ನು ಒಡೆಯುತ್ತಾರೆ ಎಂದು ಅಮಿತ್ ಶಾ ಆರೋಪಿಸಿದರು.

ಇನ್ನು ಬಿಹಾರ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದ್ದು, 2/3 ರಷ್ಟು ಬಹುಮತದಲ್ಲಿ ಗೆದ್ದು ಎನ್ ಡಿ ಎ ಸರ್ಕಾರ ರಚನೆಯಾಗಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತ ಪಡಿಸಿದರು.

ಬಿಹಾರವನ್ನು ಎಲ್ಲಿಗೆ ತೆಗೆದುಕೊಂಡು ಹೋಗಬೇಕು ಎಂಬುದನ್ನು ಬಿಹಾರ ಜನತೆಯೇ ನಿರ್ಧರಿಸಲಿ ಎಂದ ಅವರು, ಕಳೆದ 25 ವರ್ಷಗಳಿಂದ ಆಡಳಿತ ನಡೆಸಿರುವ ಲಾಲು ಮತ್ತು ನಿತೀಶ್ ಕುಮಾರ್ ಬಿಹಾರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಶಾ ದೂರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com