ಉತ್ತರಪ್ರದೇಶದ ದಾದ್ರಿ ಬಳಿಯ ಬಿಶಾದಾ ಗ್ರಾಮದಲ್ಲಿರುವ ಮುಸ್ಲಿಂ ಕುಟುಂಬವೊಂದು ಮನೆಯಲ್ಲಿ ಗೋಮಾಂಸವಿಟ್ಟುಕೊಂಡಿದ್ದಾರೆ ಎಂಬ ಶಂಕೆ ಹಿನ್ನೆಲೆ ಮನೆಗೆ ನುಗ್ಗಿದ ಉದ್ರಿಕ್ತ ಗುಂಪೊಂದು ಮೊಹಮ್ಮದ್ ಇಕ್ಲಾಖ್ ಹತ್ಯೆ ಮಾಡಿತ್ತು. ಈ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಈ ನಡುವೆ ಉತ್ತರ ಪ್ರದೇಶ ಪೊಲೀಸರು ಶಿವಂ ಮತ್ತು ವಿಶಾಲ್ ಎಂಬ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.