ಲಖನೌ: ಗೋಮಾಂಸ ಹತ್ಯೆ ಹಾಗೂ ಮಾಂಸ ಸೇವನೆ ಪ್ರಕರಣದಲ್ಲಿ ಹತ್ಯೆಗೀಡಾಗ ಮುಸ್ಲಿಂ ವ್ಯಕ್ತಿ ಮಹಮ್ಮದ್ ಅಖ್ಲಾಕ್ ಕುಟುಂಬಸ್ಥರು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಭಾನುವಾರ ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದಷ್ಟೇ ಅಖಿಲೇಶ್ ಯಾದವ್ ಅವರು ಮೃತ ವ್ಯಕ್ತಿಯ ಕುಟುಂಬಕ್ಕೆ ಪರಿಹಾರವಾಗಿ ರು.20 ಲಕ್ಷ ಘೋಷಣೆ ಮಾಡಿದ್ದರು. ಇದೀಗ ಪ್ರಕರಣ ಸಂಬಂಧ ನ್ಯಾಯಕ್ಕಾಗಿ ಮುಖ್ಯಮಂತ್ರಿಯ ಬಳಿ ಮೊರೆ ಹೋಗಿರುವ ಅಖ್ಲಾಕ್ ನ ಕುಟುಂಬಸ್ಥರು ಅಖಿಲೇಶ್ ಯಾದವ್ ಬಳಿ ಮನವಿ ಸಲ್ಲಿಸಿದ್ದಾರೆ.
ಮನವಿ ಸ್ವೀಕರಿಸಿರುವ ಅಖಿಲೇಶ್ ಯಾದವ್ ಅವರು ಪ್ರಕರಣ ಸಂಬಂಧ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದು, ಸರ್ಕಾರ ಹಾಗೂ ನ್ಯಾಯಾಲಯ ತಮ್ಮ ಕೆಲಸ ಮಾಡುತ್ತಿದೆ. ಪ್ರಕರಣದಲ್ಲಿ ಯಾರೇ ಆರೋಪಿಯಾಗಿದ್ದರು ಅವರನ್ನು ನ್ಯಾಯಾಲಯ ಬಿಡುವುದಿಲ್ಲ. ಶಿಕ್ಷೆಯಿಂದ ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆರೋಪಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶದ ದಾದ್ರಿ ಬಳಿಯ ಬಿಶಾದಾ ಗ್ರಾಮದಲ್ಲಿರುವ ಮುಸ್ಲಿಂ ಕುಟುಂಬವೊಂದು ಮನೆಯಲ್ಲಿ ಗೋಮಾಂಸವಿಟ್ಟುಕೊಂಡಿದ್ದಾರೆ ಎಂಬ ಶಂಕೆ ಹಿನ್ನೆಲೆ ಮನೆಗೆ ನುಗ್ಗಿದ ಉದ್ರಿಕ್ತ ಗುಂಪೊಂದು ಮೊಹಮ್ಮದ್ ಇಕ್ಲಾಖ್ ಹತ್ಯೆ ಮಾಡಿತ್ತು. ಈ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಈ ನಡುವೆ ಉತ್ತರ ಪ್ರದೇಶ ಪೊಲೀಸರು ಶಿವಂ ಮತ್ತು ವಿಶಾಲ್ ಎಂಬ ಪ್ರಮುಖ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
Advertisement