

ನವದೆಹಲಿ: ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಸದಾ ಸುದ್ದಿ ಮಾಡುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾದ್ರಿ ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು ಪ್ರಕರಣದಲ್ಲಿ ಹತ್ಯೆಯಾದ ಮುಸ್ಲಿಂ ವ್ಯಕ್ತಿಯ ಕುಟಂಬಕ್ಕೆ ಸರ್ಕಾರ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಆದರೆ ಹಿಂದೂ ವ್ಯಕ್ತಿ ಸತ್ತರೆ 20 ಸಾವಿರ ರೂಪಾಯಿ ಕೂಡ ನೀಡುವುದಿಲ್ಲ ಎಂದು ಆರೋಪಿಸಿದ್ದಾರೆ.
ಮೊದಲಿಗೆ ಮೃತ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಘೋಷಿಸಿದ್ದರು. ನಂತರ 20 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ತಿಳಿಸಿದೆ ಎಂದು ಹೇಳಿದ್ದಾರೆ.
ಇನ್ನು ಪ್ರಕರಣ ಸಂಬಂಧ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತ ಪಡಿಸಿರುವ ಸಾಕ್ಷಿ ಮಹಾರಾಜ್ ಲಾಲು ಪ್ರಸಾದ್ ಒಬ್ಬ ಹುಚ್ಚ ಎಂದು ಲೇವಡಿ ಮಾಡಿದ್ದಾರೆ. ಹಿಂದೂಗಳು ಕೂಡ ಗೋಮಾಂಸ ತಿನ್ನುವಂತೆ ಲಾಲು ಪ್ರಸಾದ್ ಯಾದವ್ ಹೇಳಿದ್ದರು.