ಕಾಶ್ಮೀರದಲ್ಲಿ ಗೋಮಾಂಸ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಗೋಮಾಂಸ ನಿಷೇಧ ಆದೇಶವನ್ನು ಸುಪ್ರೀಂ ಕೋರ್ಟ್ ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದು, ಈ ಸಂಬಂಧ ಮೂವರು...
ಸಾಂದರ್ಭಿಕ ಚಿಚ್ರ
ಸಾಂದರ್ಭಿಕ ಚಿಚ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗೋಮಾಂಸ ನಿಷೇಧ ಆದೇಶವನ್ನು ಸುಪ್ರೀಂ ಕೋರ್ಟ್ ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದು, ಈ ಸಂಬಂಧ ಮೂವರು ನ್ಯಾಯಾಧೀಶರನ್ನೊಳಗೊಂಡ ಪೀಠ ರಚಿಸುವಂತೆ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ಗೆ ಸೂಚಿಸಿದೆ.

ಗೋಮಾಂಸ ನಿಷೇಧ ಆದೇಶವನ್ನು ಎರಡು ತಿಂಗಳುಗಳ ಕಾಲ ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ್ದು, ಈ ವೇಳೆ ನಿಷೇಧ ಆದೇಶ ಜಾರಿಗೊಳಿಸುವಂತಿಲ್ಲ ಎಂದು ಸೂಚಿಸಿದೆ.

ಕಣಿವೆ ರಾಜ್ಯದಲ್ಲಿ ಗೋಮಾಂಸ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ಶ್ರೀನಗರ ಮತ್ತು ಜಮ್ಮು ವಿಭಾಗೀಯ ಪೀಠ ಭಿನ್ನ ತೀರ್ಪು ನೀಡಿದ್ದವು. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಜಮ್ಮು ವಿಭಾಗೀಯ ಪೀಠ ಸೆಪ್ಟೆಂಬರ್ 8ರಂದು ರಾಜ್ಯದಲ್ಲಿ ಗೋಮಾಂಸ ಮಾರಾಟ ನಿಷೇಧ ಜಾರಿಗೊಳಿಸುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿತ್ತು. ಆದರೆ ಒಂದು ವಾರಗಳ ಬಳಿಕ ಜಮ್ಮು ವಿಭಾಗೀಯ ಪೀಠ ನಿಷೇಧ ಆದೇಶವನ್ನು ರದ್ದುಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com