ಭಾರ್ತಿಗೆ ಜಾಮೀನು ನಿರಾಕರಿಸಿದ ಸುಪ್ರೀಂ, ರಾಜಿ ಸಂಧಾನಕ್ಕೆ ಲಿಪಿಕಾ ನಕಾರ

ಕೌಟುಂಬಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ಹಾಗೂ ಮಾಜಿ ಸಚಿವ ಸೋಮನಾಥ್ ಭಾರ್ತಿ ಅವರಿಗೆ ಭಾರಿ...
ಸೋಮನಾಥ್ ಭಾರ್ತಿ
ಸೋಮನಾಥ್ ಭಾರ್ತಿ

ನವದೆಹಲಿ: ಕೌಟುಂಬಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ಹಾಗೂ ಮಾಜಿ ಸಚಿವ ಸೋಮನಾಥ್ ಭಾರ್ತಿ ಅವರಿಗೆ ಭಾರಿ ಹಿನ್ನಡೆಯಾಗಿದೆ.

ಒಂದು ಕಡೆ ಸುಪ್ರೀಂ ಕೋರ್ಟ್ ದೆಹಲಿ ಮಾಜಿ ಸಚಿವನಿಗೆ ಜಾಮೀನು ನೀಡಲು ನಿರಾಕರಿಸಿದರೆ, ಮತ್ತೊಂದು ಕಡೆ ಪತ್ನಿ ಲಿಪಿಕಾ ಮಿತ್ರಾ ಅವರು ರಾಜಿ ಸಂಧಾನಕ್ಕೂ ನಿರಾಕರಿಸಿದ್ದಾರೆ.

ಸೋಮನಾಥ್ ಭಾರ್ತಿ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಸುಪ್ರೀಂ ಪೀಠ, ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸುವಂತೆ ಹಾಗೂ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಇದೇ ವೇಳೆ ಭಾರ್ತಿ ವಿರುದ್ಧದ ಕೌಟುಂಬಿಕ ದೌರ್ಜನ್ಯ ಹಾಗೂ ಕೊಲೆ ಯತ್ನ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನಲ್ಲಿ ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಳ್ಳುವುದಕ್ಕೆ ಪತ್ನಿ ಲಿಪಿಕಾ ಮಿತ್ರಾ ಅವರು ನಿರಾಕರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com