ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಿಸಲು ಉತ್ತರ ಪ್ರದೇಶ ಸರ್ಕಾರ ಚಿಂತನೆ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಮೇಲೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಹಿನ್ನೆಲೆಯಲ್ಲಿ ಎಸ್ ಎಸ್ಟಿ ಗಾಗಿ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಿಸಲು...

ಲಖ್ನೌ: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಮೇಲೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಹಿನ್ನೆಲೆಯಲ್ಲಿ ಎಸ್ ಎಸ್ಟಿ ಗಾಗಿ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಿಸಲು ಉತ್ತರ ಪ್ರದೇಶ ಸರ್ಕಾರ ಚಿಂತನೆ ಮಾಡುತ್ತಿದೆ.

ಬಿಹಾರ, ಜಾರ್ಖಂಡ್, ಮಧ್ಯ ಪ್ರದೇಶ, ಛತ್ತೀಸ್ ಗಡ. ಮತ್ತು ಆಂಧ್ರ ಪ್ರದೇಶಗಳಲ್ಲಿ  ಎಸ್ ಎಸ್ಟಿ ಸಮುದಾಯಕ್ಕೆ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಾಣ ಮಾಡಲಾಗಿದೆ.ಹೀಗಾಗಿ ಪ್ರತಿ ಜಿಲ್ಲೆಗೆ ಒಂದು ಪೊಲೀಸ್ ಠಾಣೆ ನಿರ್ಮಿಸಲು ಉತ್ತರ ಪ್ರದೇಶ ಸರ್ಕಾರ ಯೋಜನೆ ರೂಪಿಸುತ್ತಿದೆ.

ಮೊದಲ ಹಂತದಲ್ಲಿ ಪ್ರಮುಖ ನಗರ ಹಾಗೂ ಜಿಲ್ಲೆಗಳಲ್ಲಿ ಠಾಣೆ ನಿರ್ಮಿಸಿ ನಂತರ ಹಂತ ಹಂತವಾಗಿ ಎಲ್ಲಾ ಜಿಲ್ಲೆಗಳಲ್ಲೂ ಎಸ್ ಸಿ , ಎಸ್ ಟಿ ಗಳಿಗಾಗಿ ಠಾಣೆ ಸ್ಥಾಪಿಸುವುದಾಗಿ ಡಿಜಿಪಿ ಕಚೇರಿ ತಿಳಿಸಿದೆ.

ಇನ್ನು ಈ ಪೊಲೀಸ್ ಠಾಣೆಯಲ್ಲಿ ಒಬ್ಬ ಇನ್ಸ್ ಪೆಕ್ಟರ್ ಇಲ್ಲವೇ ಠಾಣಾಧಿಕಾರಿ ಇರುತ್ತಾರೆ. ಜೊತೆಗೆ ಇಬ್ಬರು ಹೆಡ್ ಕಾನ್ಸ್ ಸ್ಟೇಬರ್ ಮತ್ತು ಇಬ್ಬರು ಕಾನ್ಸ್ ಸ್ಟೇಬಲ್ ಇರುತ್ತಾರೆ. ಜೊತೆ ಮಹಿಳಾ ಪೊಲೀಸ್ ಪೇದೆಗಳು ಕೂಡ ಇರುತ್ತಾರೆ.

Related Stories

No stories found.

Advertisement

X
Kannada Prabha
www.kannadaprabha.com