ಶೀನಾ ಬೋರಾ ಪ್ರಕರಣ: ಜೈಲಿನಲ್ಲೇ ವಿಚಾರಣೆ ನಡೆಸಲು ನ್ಯಾಯಾಲಯ ಅನುಮತಿ

ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಜೈಲಿನಲ್ಲೇ ವಿಚಾರಣೆ ನಡೆಸುವಂತೆ ಸಿಬಿಐ ಅಧಿಕಾರಿಗಳಿಗೆ ಮುಂಬೈ ನ್ಯಾಯಾಲಯವು ಬುಧವಾರ ಅನುಮತಿ ನೀಡಿದೆ...
ಶೀನಾ ಬೋರಾ (ಸಂಗ್ರಹ ಚಿತ್ರ)
ಶೀನಾ ಬೋರಾ (ಸಂಗ್ರಹ ಚಿತ್ರ)
Updated on: 

ಮುಂಬೈ: ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಜೈಲಿನಲ್ಲೇ ವಿಚಾರಣೆ ನಡೆಸುವಂತೆ ಸಿಬಿಐ ಅಧಿಕಾರಿಗಳಿಗೆ ಮುಂಬೈ ನ್ಯಾಯಾಲಯವು ಬುಧವಾರ ಅನುಮತಿ ನೀಡಿದೆ.

ಇಂದ್ರಾಣಿ ಮುಖರ್ಜಿ, ಮಾಜಿ ಪತಿ ಸಂಜೀವಾ ಖನ್ನಾ, ಕಾರು ಚಾಲಕ ಶ್ಯಾಮ್ ರಾಯ್‌ ಅವರನ್ನು ಜೈಲಿನೊಳಗೆ ವಿಚಾರಣೆಗೆ ಒಳಪಡಿಸಲು ಕನಿಷ್ಠ ಮೂರು ವಾರಗಳ ಕಾಲ ಅವಕಾಶ ನೀಡಬೇಕು ಎಂದು ಸಿಬಿಐ ಕೋರ್ಟ್‌ಗೆ ನ್ಯಾಯಾಲಯದ ಬಳಿ ಮನವಿ ಮಾಡಿತ್ತು. ಈ ಮನವಿಯನ್ನು ಇಂದು ಪರಿಶೀಲಿಸಿದ ಮುಂಬೈ ನ್ಯಾಯಾಲಯವು ಇದೀಗ ಜೈಲಿನಲ್ಲೇ ವಿಚಾರಣೆ ನಡೆಸಲು 12 ದಿನಗಳ ಕಾಲ ಅವಕಾಶ ನೀಡಿದೆ.

ಮುಂಬೈ ಪೊಲೀಸರು ನಡೆಸುತ್ತಿದ್ದ ಶೀನಾ ಬೋರಾ ಕೊಲೆ ಪ್ರಕರಣದ ತನಿಖೆಯನ್ನು ಒಂದು ತಿಂಗಳ ಹಿಂದಷ್ಟೇ ಮಹಾರಾಷ್ಟ್ರ ಸರ್ಕಾರ ಸಿಬಿಐ ವಶಕ್ಕೆ ಒಪ್ಪಿಸಿತ್ತು.  ಈ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲು, ಜೈಲಿನಲ್ಲೇ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಮುಂಬೈ ಪೊಲೀಸರ ವರದಿಯನ್ನೇ ಅವಲಂಬಿಸಬೇಕಾಗುತ್ತದೆ ಎಂದು ಸಿಬಿಐ ಕೋರ್ಟ್‌ಗೆ  ಮನವಿ ಮಾಡಿತ್ತು.

ಶೀನಾ ಬೋರಾ  ಪ್ರಕರಣದ ತನಿಖೆಯ ಸುತ್ತ ವಿವಾದ ಎದ್ದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್ ಕಮಿಷನರ್ ಹುದ್ದೆಯಲ್ಲಿದ್ದ ರಾಕೇಶ್ ಮರಿಯಾ ಅವರನ್ನು ಹಠಾತ್ತಾಗಿ ವರ್ಗಾವಣೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com