
ಮುಂಬೈ; ಪಾಕಿಸ್ತಾನದ ಖ್ಯಾತ ಘಜಲ್ ಗಾಯಕ ಗುಲಾಂ ಅಲಿ ಅವರು ಮುಂಬೈ ನಲ್ಲಿ ಸಂಗೀತ ಕಛೇರಿ ನಡೆಸುತ್ತಿರುವುದನ್ನು ಶಿವಸೇನೆ ಬುಧವಾರ ತೀವ್ರವಾಗಿ ವಿರೋಧಿಸಿದೆ.
ಈ ಕುರಿತಂತೆ ಮಾತನಾಡಿರುವ ಶಿವಸೇನೆಯು ಗಡಿಯಲ್ಲಿ ಪಾಕಿಸ್ತಾನ ಸೇನೆಯು ನಮ್ಮ ಸೈನಿಕರನ್ನು ಹತ್ಯೆ ಮಾಡುತ್ತಿದೆ. ಈ ಸಂದರ್ಭದಲ್ಲಿ ಭಾರತ ಪಾಕಿಸ್ತಾನದೊಂದಿಗೆ ಸಾಂಸ್ಕೃತಿಕ ಸಂಬಂಧ ಬೆಳೆಸಲು ಸಾಧ್ಯವಿಲ್ಲವಾಗಿದ್ದು, ಮುಂಬೈ ನಲ್ಲಿ ನಡೆಯಲಿರುವ ಗಾಯಕ ಗುಲಾಂ ಅಲಿ ಅವರ ಸಂಗೀತ ಕಛೇರಿಯನ್ನು ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿದೆ.
ಶುಕ್ರವಾರ ಮುಂಬೈಯ ಷಣ್ಮುಖಾನಂದ್ ಹಾಲ್ ನಲ್ಲಿ ಗುಲಾಂ ಅಲಿ ಅವರ ಸಂಗೀತ ಕಛೇರಿ ಯನ್ನು ಏರ್ಪಡಿಸಲಾಗಿದೆ. ಹಲವಾರು ಬಾಲಿವುಡ್ ಗೀತೆಗಳನ್ನು ಹಾಡಿರುವ ಗುಲಾಂ ಅಲಿ, ಕಳೆದ ವರ್ಷ ವಾರಣಾಸಿ ಸಂಕಟ್ ಮೋಚನ್ ದೇಗುಲದಲ್ಲಿ ಸಂಗೀತ ಕಛೇರಿಯನ್ನು ನಡೆಸಿಕೊಟ್ಟಿದ್ದರು.
Advertisement