ವಾರಾಣಸಿ: ಪ್ರಧಾನಿ ಮೋದಿ ಕ್ಷೇತ್ರ ವಾರಾಣಸಿ ಯಲ್ಲಿ ಉಂಟಾಗಿದ್ದ ಹಿಂಸಾತ್ಮಕ ಘಟನೆಗಳಿಗೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಅಜಯ ರಾಯ್ ಸೇರಿ ಒಟ್ಟು 50 ಮಂದಿಯನ್ನು ಬಂಧಿಸಲಾಗಿದೆ.
ಸೋಮವಾರ ನಡೆದ ಹಿಂಸಾಕೃತ್ಯಗಳಲ್ಲಿ ರಾಯ್ ಪಾತ್ರ ಮುಖ್ಯವಾಗಿದೆ ಎಂದು ಆರೋಪಿಸಲಾ ಗಿದೆ. ಮಂಗಳವಾರ ಪರಿಸ್ಥಿತಿ ಶಾಂತವಾಗಿತ್ತು. ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು.
ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಗೋದೋವಿಲಾ ಪ್ರದೇಶದಲ್ಲಿ ಪ್ರವಾಸಿಗರ ಸಂಖ್ಯೆ ತೀರಾ ವಿರಳವಾಗಿತ್ತು. ವಾರಾಣಸಿಯ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲಾ ಪೊಲೀಸರ ಜತೆಗೆ ವಿಶೇಷ ಕಾರ್ಯಾಚರಣೆ ಪಡೆಯನ್ನೂ ನಿಯೋಜಿಸಲಾಗಿದೆ.