ನವದೆಹಲಿ: ರಾಷ್ಟ್ರೀಯ ಯುದ್ಧ ಸ್ಮಾರಕ ಮತ್ತು ಸಮರ ವಸ್ತು ಸಂಗ್ರಹಾಲಯ ನಿರ್ಮಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ದೆಹಲಿಯ ಇಂಡಿಯಾ ಗೇಟ್ ಪಕ್ಕದಲ್ಲಿರುವ ಪ್ರಿನ್ಸೆಸ್ ಪಾರ್ಕ್‍ನಲ್ಲಿ ರೂಪುಗೊಳ್ಳಲಿರುವ ಯೋಜನೆ ಅಂದಾಜು ವೆಚ್ಚ ರು.500 ಕೋಟಿ. ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ಸ್ವಾತಂತ್ರ್ಯೋತ್ತರದಲ್ಲಿ ನಡೆದ ಯುದ್ಧಗಳಲ್ಲಿ ಮಡಿದ ಸುಮಾರು 22500 ಸೈನಿಕರ ತ್ಯಾಗ ಬಲಿದಾನಗಳ ಪ್ರತೀಕವಾಗಿ ಯುದ್ಧ ಸ್ಮಾರಕ ನಿರ್ಮಿಸುವ ಪ್ರಸ್ತಾಪಕ್ಕೆ ಅನುಮೋದಿಸಲಾಯಿತು.