ವರದಕ್ಷಿಣೆ ಕಿರುಕುಳ: ರಾಧೆ ಮಾಗೆ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈ ಕೋರ್ಟ್

ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಬಂಧನದ ಭೀತಿ ಎದುರಿಸುತ್ತಿದ್ದ ಸ್ವಯಂ ಘೋಷಿತ ದೇವಮಹಿಳೆ ರಾಧೆ ಮಾ ಅವರಿಗೆ ಬಾಂಬೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನನ್ನು ಗುರುವಾರ ಮಂಜೂರು ಮಾಡಿದೆ...
ಸ್ವಯಂ ಘೋಷಿತ ದೇವಮಹಿಳೆ ರಾಧೆ ಮಾ (ಸಂಗ್ರಹ ಚಿತ್ರ)
ಸ್ವಯಂ ಘೋಷಿತ ದೇವಮಹಿಳೆ ರಾಧೆ ಮಾ (ಸಂಗ್ರಹ ಚಿತ್ರ)

ಮುಂಬೈ: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಬಂಧನದ ಭೀತಿ ಎದುರಿಸುತ್ತಿದ್ದ ಸ್ವಯಂ ಘೋಷಿತ ದೇವಮಹಿಳೆ ರಾಧೆ ಮಾ ಅವರಿಗೆ ಬಾಂಬೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನನ್ನು ಗುರುವಾರ ಮಂಜೂರು ಮಾಡಿದೆ.

ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ರಾಧೆ ಮಾ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೇವತಿ ಮೋಹಿತ್ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದ್ದಾರೆ.

ಆಗಸ್ಟ್ 13 ರಂದು ಸೆಷನ್ಸ್ ಕೋರ್ಟ್ ರಾಧೆ ಮಾ ಅವರ ಜಾಮೀನು ಅರ್ಜಿಯನ್ನು ಕಡೆಗಣಿಸಿತ್ತು. ಹೀಗಾಗಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಸ್ವಯಂ ಘೋಷಿತ ದೇವ ಮಹಿಳೆ ರಾಧೆ ಮಾ ಅವರ ಸೂಚನೆ ಮೇರೆಗೆ ನನ್ನ ಗಂಡನ ಮನೆಯವರು ನನಗೆ ಮಾನಸಿಕವಾಗಿ ಹಿಂಸೆ ನೀಡಿದ್ದರಲ್ಲದೇ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ನೀಡುತ್ತಿರುವ ವರದಕ್ಷಿಣೆ ಕಿರುಕುಳಕ್ಕೆ ರಾಧೆ ಮಾ ಅವರು ನೀಡುತ್ತಿರುವ ಪ್ರಚೋದನೆಯೇ ಕಾರಣ ಎಂದು ಮಹಿಳೆಯೊಬ್ಬರು ಮುಂಬೈ ಠಾಣೆಯೊಂದರಲ್ಲಿ ರಾಧೆ ಮಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ನಂತರ ಬಾಲಿವುಡ್ ನಟಿ ಡಾಲಿ ಬಿಂದ್ರಾ ಸಹ ರಾಧೆ ಮಾ ತಮ್ಮ ಭಕ್ತರ ಜತೆ ಲೈಂಗಿಕ ಸಂಪರ್ಕ ನಡೆಸುವಂತೆ ಒತ್ತಾಯ ಹೇರಿದ್ದರು ಎಂದು ಆರೋಪಿಸಿ ದೂರು ದಾಖಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com