ದೆಹಲಿ ಸೇರಿ ಹಲವೆಡೆ ಲಘು ಭೂಕಂಪ

ರಾಷ್ಟ್ರದ ರಾಜಧಾನಿ ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಶುಕ್ರವಾರ ತಡ ರಾತ್ರಿ ಲಘು ಭೂಕಂಪ ಸಂಭವಿಸಿದ್ದು, ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದೆಹಲಿ: ರಾಷ್ಟ್ರದ ರಾಜಧಾನಿ ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಶುಕ್ರವಾರ ತಡ ರಾತ್ರಿ ಲಘು ಭೂಕಂಪ ಸಂಭವಿಸಿದ್ದು, ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ರಾಜಧಾನಿಯ ಎನ್‌ಸಿಆರ್ ಪ್ರದೇಶದಲ್ಲಿ ತಡ ರಾತ್ರಿ 1.40ರ ಸುಮಾರಿಗೆ ಲಘ ಭೂಕಂಪನ ಸಂಭವಿಸಿದೆ. ಭೂಕಂಪದ ತೀವ್ರತೆ ದೆಹಲಿಯಲ್ಲಿ ರಿಕ್ಟರ್‌ ಮಾಪಕದಲ್ಲಿ  3.0 ದಾಖಲಾಗಿದ್ದು, ಸಿಕ್ಕಿಂ ಹಾಗೂ ಮತ್ತಿತರೆ ಪ್ರದೇಶಗಳಲ್ಲಿ 4.5ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಕೇಂದ್ರ ಬಿಂದು ಎನ್‌ಸಿಆರ್‌ನಲ್ಲಿ 5 ಕಿ.ಮೀ ಭೂಮಿಯ ಆಳದಲ್ಲಿ ಕೇಂದ್ರೀಕೃತವಾಗಿತ್ತು ಎಂದು ಅವರು ಹೇಳಿದ್ದಾರೆ.

ಲಘು ಭೂಕಂಪದಿಂದಾಗಿ ಯಾವುದೇ ಪ್ರಾಣ ಹಾನಿ, ಆಸ್ತಿ-ಪಾಸ್ತಿ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ ಸಿಕ್ಕಿಂನ ಹಲವೆಡೆ ಅಲ್ಲಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು, ಅಲ್ಲಿಯೂ ಯಾವುದೇ ರೀತಿಯ ಹಾನಿಗಳು ಉಂಟಾಗಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com