ಬಿಹಾರ ಸೋಲಿನ ನಂತರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ?: ಲಾಲು

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)ದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್...
ಲಾಲು ಪ್ರಸಾದ್ ಯಾದವ್
ಲಾಲು ಪ್ರಸಾದ್ ಯಾದವ್
Updated on: 

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)ದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, ಬಿಹಾರ ಸೋಲಿನ ನಂತರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ? ಎಂದು ಸೋಮವಾರ ಪ್ರಶ್ನಿಸಿದ್ದಾರೆ.

'ಬಿಜೆಪಿ ಮೋದಿ ನೇತೃತ್ವದಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರ ನಡೆಸುತ್ತಿದೆ. ಕಳೆದ ಮೂರು ತಿಂಗಳಿಂದ ಇಡೀ ಅವರ ಸಚಿವ ಸಂಪುಟವೇ ಪ್ರಚಾರದಲ್ಲಿ ಭಾಗಿಯಾಗಿದೆ. ಚುನಾವಣೆಯಲ್ಲಿ ಸೋತರೆ ಅವರು ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೆಯೇ?' ಎಂದು ಲಾಲು ಟ್ವೀಟ್ ಮಾಡಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಮೋದಿ ಲಾಲು ಪ್ರಸಾದ್ ಯಾದವ್ ಹಾಗೂ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರೇ ನೇರ ಎದುರಾಳಿಗಳು. ಚುನಾವಣಾ ರ್ಯಾಲಿಯಲ್ಲಿ ಈ ಇಬ್ಬರ ವಿರುದ್ಧ ಮೋದಿ ವಾಗ್ದಾಳಿ ನಡೆಸುತ್ತಿದ್ದಾರೆ.

'ಕಳೆದ 25 ವರ್ಷಗಳಿಂದ ಬಡಾ ಭಾಯಿ(ಲಾಲು) ಮತ್ತು ಛೋಟಾ ಭಾಯಿ(ನಿತಿಶ್) ಬಿಹಾರದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಆದರೆ ಅವರು ಯಾವತ್ತೂ ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಿಲ್ಲ' ಎಂದು ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com