

ನವದೆಹಲಿ: ಯಾವುದೇ ಇಲಾಖೆಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕ್ಷಮೆ ಇಲ್ಲ ಹಾಗೂ ಭ್ರಷ್ಟಾಚಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುಡುಗಿದ್ದಾರೆ.
ಈ ಸಂಬಂಧ ತಮ್ಮ ಟ್ವೀಟ್ ನಲ್ಲಿ ಟ್ವಿಟ್ಟರ್ ಮಾಡಿಕೊಂಡಿರುವ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿಯ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆ ನಡೆಸಿದ ಕೇಜ್ರಿವಾಲ್, ತಮ್ಮ ಇಲಾಖೆಗಳಲ್ಲಿ ಭ್ರಷ್ಟಾಚಾರದ ಪ್ರಮಾಣ ಶೂನ್ಯವಾಗಿರಬೇಕು ಎಂದು ಕರೆ ನೀಡಿದ್ದಾರೆ.
ಇನ್ನು ಶನಿವಾರವಷ್ಚೇ ಆಮ್ ಆದ್ಮಿ ಪಕ್ಷದ ಶಾಸಕರು ಹಾಗೂ ಅವರ ಕುಟುಂಬಸ್ಥರನ್ನು ಕರೆದು, ಆಹಾರ ಸಚಿವ ಆಸಿಂ ಅಹಮದ್ ಖಾನ್ ಅವರ ವಜಾಗೊಳಿಸಿದ್ದ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಭ್ರಷ್ಟಾಚಾರದ ವಿರುದ್ಧ ಹೋರಾಡುವುಂತೆ ತಿಳಿಸಿದ್ದಾರೆ.