

ಪಾಟ್ನ: ಬಹು ಚರ್ಚಿತ ಬಿಹಾರ ವಿಧಾನಸಭಾ ಚುನಾವಣಾ ಸಮರ ಸೋಮವಾರ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಬಿಹಾರ ಜನತೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ಮೋದಿಯವರು ಸೋಮವಾರ ಕರೆ ನೀಡಿದ್ದಾರೆ.
ಬಿಹಾರ ಚುನಾವಣೆ ಕುರಿತಂತೆ ಇಂದು ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಆರಂಭಗೊಳ್ಳುತ್ತಿದ್ದು, ಜನತೆಯೆಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ. ಈ ಬಾರಿಯ ಚುನಾವಣೆಯಲ್ಲಿ ಬಹು ಜನರು ಭಾಗವಹಿಸಬೇಕು. ಪ್ರಮುಖವಾಗಿ ನನ್ನ ಯುವ ಸ್ನೇಹಿತರು ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಇಂದು ಬೆಳಿಗ್ಗೆಯಿಂದಲೇ ಮೊದಲ ಹಂತದ ಮತದಾನ ಆರಂಭಗೊಂಡಿದ್ದು, ಒಟ್ಟು 49 ಕ್ಷೇತ್ರಗಳ ಸ್ಪರ್ಧಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.